ಕೊರೋನಾ ವೈರಸ್: ಸದ್ಯಕ್ಕೆ ಬಾರ್ ಮತ್ತು ರೆಸ್ಟೋರೆಂಟ್ ತೆರೆಯದಿರಲು ಸರ್ಕಾರ ನಿರ್ಧಾರ- ಅಬಕಾರಿ ಸಚಿವ ನಾಗೇಶ್
ಕೊರೋನಾ ವೈರಸ್ ಲಾಕ್ ಡೌನ್ 3.0 ನಡುವೆಯೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೆಲ ಆರ್ಥಿಕ ಚಟುವಟಿಕೆಗಳಿಗೆ ವಿನಾಯಿತಿ ನೀಡಿದೆಯಾದರೂ ಸದ್ಯಕ್ಕೆ ಬಾರ್ ಮತ್ತು ರೆಸ್ಟೋರೆಂಟ್ ತೆರೆಯದಿರಲು ಸರ್ಕಾರ ನಿರ್ಧರಿಸಿದೆ ಎಂದು ಅಬಕಾರಿ ಸಚಿವ ನಾಗೇಶ್ ಹೇಳಿದ್ದಾರೆ.
ಬೆಂಗಳೂರು: ಕೊರೋನಾ ವೈರಸ್ ಲಾಕ್ ಡೌನ್ 3.0 ನಡುವೆಯೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೆಲ ಆರ್ಥಿಕ ಚಟುವಟಿಕೆಗಳಿಗೆ ವಿನಾಯಿತಿ ನೀಡಿದೆಯಾದರೂ ಸದ್ಯಕ್ಕೆ ಬಾರ್ ಮತ್ತು ರೆಸ್ಟೋರೆಂಟ್ ತೆರೆಯದಿರಲು ಸರ್ಕಾರ ನಿರ್ಧರಿಸಿದೆ ಎಂದು ಅಬಕಾರಿ ಸಚಿವ ನಾಗೇಶ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ನಡುವೆ ಷರತ್ತುಗಳೊಂದಿಗೆ ಮೇ.04ರಿಂದ ಮದ್ಯದ ಅಂಗಡಿಗಳನ್ನು ತೆರೆಯಲು ರಾಜ್ಯ ಸರ್ಕಾರವು ಸಂಪೂರ್ಣ ಅನುಮತಿ ನೀಡಿದೆಯಾದರೂ ಬಾರ್ ಮತ್ತು ರೆಸ್ಟೋರೆಂಟ್ ತೆರೆಯದಿರಲು ಸರ್ಕಾರ ನಿರ್ಧರಿಸಿದೆ. ಕೇವಲ ಎಂಎಸ್ಐಎಲ್ ಹಾಗೂ ವೈನ್ ಶಾಪ್ ಮೂಲಕ ಮಾತ್ರ ಮದ್ಯ ಮಾರಾಟಕ್ಕೆ ಅನುಮತಿ ನೀಡಿ ಸುತ್ತೋಲೆ ಹೊರಡಿಸಲಾಗಿದೆ ಎಂದು ಹೇಳಿದರು.
ಬಾರ್ ಅಂಡ್ ರೆಸ್ಟೋರೆಂಟ್ ಓಪನ್ ಮಾಡಲಾಗುತ್ತೆ ಎಂಬ ಸುದ್ದಿ ಹಬ್ಬುತ್ತಿದೆ. ಆದರೆ ಇದೆಲ್ಲವೂ ಸತ್ಯಕ್ಕೆ ದೂರವಾಗಿದ್ದು, ಈ ಬಗ್ಗೆ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸದ್ಯಕ್ಕೆ ಬಾರ್ ಅಂಡ್ ರೆಸ್ಟೋರೆಂಟ್ ಸದ್ಯ ಓಪನ್ ಮಾಡುವ ಚಿಂತನೆ ಇಲ್ಲ, ಬಜೆಟ್ ನಲ್ಲಿ ಹೇಳಿದಂತೆ ಶೇ 6 ರಷ್ಟು ಹಾಗೂ ಈಗ ಶೇ 11ರಷ್ಟು ಸೇರಿಸಿ ಶೇ 17ರಷ್ಟು ಅಬಕಾರಿ ಸುಂಕ ಹೆಚ್ಚಳ ಮಾಡಲಾಗಿದೆ, ಈ ಬಗ್ಗೆ ಅಧಿಕೃತ ಅದೇಶದಲ್ಲಿ ವಿವರಣೆ ಸಿಗಲಿದೆ. ಇನ್ನೂ ಹದಿನೈದು ದಿನಕ್ಕೆ ಬೇಕಾದಷ್ಟು ಮದ್ಯ ನಮ್ಮ ಬಳಿ ಇದೆ. ನಿನ್ನೆಗಿಂತಲೂ ಹೆಚ್ಚು ಆದಾಯ ಇವತ್ತು ಸರ್ಕಾರಕ್ಕೆ ಬಂದಿದೆ. ಇವತ್ತು ಹೊಸ ತೆರಿಗೆ ಸೇರಿದೆ. ಹೀಗಾಗಿ ಸರ್ಕಾರಕ್ಕೆ ಹೆಚ್ಚು ರಾಜಧನ ಬರುತ್ತದೆ ಎಂದು ನಾಗೇಶ್ ತಿಳಿಸಿದರು.
ಆಂಧ್ರ ಹಾಗೂ ಮಹಾರಾಷ್ಟ್ರ ಮಾದರಿ ಸೇಲ್
ಕೊರೊನಾ ನಿಯಂತ್ರಣಕ್ಕಾಗಿ ಆರ್ಥಿಕ ಸಂಪನ್ಮೂಲ ಸಂಗ್ರಹದ ಉದ್ದೇಶದಿಂದ ಮದ್ಯಕ್ಕೆ ಹೆಚ್ಚುವರಿ ಬೆಲೆ ಹಾಕುವುದು ಉತ್ತಮ. ಶೇಕಡ 50 ರಷ್ಟು ಅಲ್ಲದಿದ್ದರೂ ಹೆಚ್ಚು ಮಾಡುವುದು ಒಳಿತು ಎಂಬ ಅಭಿಪ್ರಾಯ ಕೇಳಿ ಬರುತ್ತಿದೆ. ಮದ್ಯಪ್ರಿಯರು ಎಷ್ಟೇ ದುಬಾರಿಯಾದರೂ ಖರೀದಿ ಮಾಡ್ತಾರೆ. ದೆಹಲಿ ಮತ್ತು ಆಂಧ್ರಪ್ರದೇಶ ರಾಜ್ಯಗಳ ಮಾದರಿ ಅಳವಡಿಸುವ ಬಗ್ಗೆ ಚಿಂತನೆ ಇದ್ದು, ಈ ಸಂಬಂಧ ಚರ್ಚೆ ಮಾಡಲಾಗುವುದು ಎಂದು ಸಚಿವರು ಹೇಳಿದರು.
Related Article
ಮದ್ಯ ಪ್ರಿಯರ ಕಿಕ್ ಇಳಿಸಿದ ಸರ್ಕಾರ; ಸುಂಕ ಹೆಚ್ಚಳ, ಅಬಕಾರಿ ಇಲಾಖೆಗೆ 2,530 ಕೋಟಿ ಆದಾಯದ ಗುರಿ!
ಕುಡಿದ ಮತ್ತಿನಲ್ಲಿ ಹಾವನ್ನು ಕಚ್ಚಿ ಕೊಂದು ಜೈಲು ಸೇರಿದ ಭೂಪ!
ಮದ್ಯಕ್ಕೆ ಮುಗಿಬಿದ್ದ ಪಾನಪ್ರಿಯರು: 3ನೇ ದಿನ ಭರ್ಜರಿ ಮಾರಾಟ, ಗಳಿಕೆ ಎಷ್ಟು ಗೊತ್ತಾ?
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.