ರಾಜ್ಯ

ಕೋವಿಡ್-19: ಬಿಬಿಎಂಪಿಯಿಂದ ಬೆಂಗಳೂರು ನಗರಾದ್ಯಂತ ಆರೋಗ್ಯ ಸಮೀಕ್ಷೆ

Srinivasamurthy VN

ಬೆಂಗಳೂರು: ಬೆಂಗಳೂರು ನಗರದಲ್ಲಿ ಕೋವಿಡ್‌ 19 ಸೋಂಕು ಹರಡುವುದನ್ನು ಹತ್ತಿಕ್ಕುವ ಸಲುವಾಗಿ ನಗರಾದ್ಯಂತ ಆರೋಗ್ಯ ಸಮೀಕ್ಷೆ ನಡೆಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿದೆ.

ಇದಕ್ಕಾಗಿ ಬಿಬಿಎಂಪಿ 4500ಕ್ಕೂ ಹೆಚ್ಚು ಸಮೀಕ್ಷರಿಗೆ ತರಬೇತಿ ನೀಡಿದೆ. ಇವರು ಶುಕ್ರವಾರದಿಂದಲೇ ಮನೆ ಮನೆಗೆ ತೆರಳಿ ಜನರ ಆರೋಗ್ಯ ಮಾಹಿತಿ ಕಲೆ ಹಾಕಲಿದ್ದಾರೆ. ಶೀತ ಜ್ವರದ ಲಕ್ಷಣ (ಐಎಲ್‌ಐ) ಹಾಗೂ ತೀವ್ರ ಉಸಿರಾಟದ ಸಮಸ್ಯೆ (ಎಸ್‌ಎಆರ್‌ಐ) ಸಮಸ್ಯೆ ಹೊಂದಿರುವವರು,  ಗರ್ಭಿಣಿಯರು, ಮಧುಮೇಹ , ರಕ್ತದೊತ್ತಡದಿಂದ ಬಳಲುತ್ತಿರುವವರು, 65 ವರ್ಷ ಮೇಲ್ಪಟ್ಟವನ್ನು ಗುರುತಿಸಿ ಅವರನ್ನು ಕೋವಿಡ್-19 ಸೋಂಕಿನಿಂದ ರಕ್ಷಿಸುವ ಸಲುವಾಗಿ ಈ ಸಮೀಕ್ಷೆ ಕೈಗೊಳ್ಳಲಾಗಿದೆ. ಇದಕ್ಕಾಗಿ 4500ಕ್ಕೂ ಹೆಚ್ಚು ಸಮೀಕ್ಷಕರಿಗೆ ತರಬೇತಿ ನೀಡಲಾಗಿದ್ದು, ಅವರು  ಶುಕ್ರವಾರದಿಂದ ಅಂದರೆ ಇಂದಿನಿಂದಲೇ ಮನೆ ಮನೆಗೆ ತೆರಳಿ ಜನರ ಆರೋಗ್ಯ ಮಾಹಿತಿ ಕಲೆ ಹಾಕಲಿದ್ದಾರೆ.

ಶೀತ ಜ್ವರದ ಲಕ್ಷಣ (ಐಎಲ್‌ಐ) ಹಾಗೂ ತೀವ್ರ ಉಸಿರಾಟದ ಸಮಸ್ಯೆ (ಎಸ್‌ಎಆರ್‌ಐ) ಮುಂತಾದ ಅನಾರೋಗ್ಯ ಸಮಸ್ಯೆಯನ್ನು ಹೊಂದಿರುವವರು, ಗರ್ಭಿಣಿಯರು, ಮಧುಮೇಹ  ಇರುವವರು, 65 ವರ್ಷ ಮೇಲ್ಪಟ್ಟವರನ್ನು ಗುರುತಿಸಿ ಅವರನ್ನು ಕೋವಿಡ್-19 ಸೋಂಕಿನಿಂದ  ರಕ್ಷಿಸಬೇಕಾಗಿದೆ. ಈ ಸಲುವಾಗಿ ಕಂಟೈನ್‌ಮೆಂಟ್‌ ಝೋನ್ಗಳನ್ನು ಹೊರತುಪಡಿಸಿ ಉಳಿದೆಲ್ಲಾ ಕಡೆ ಎಲ್ಲಾ ಕುಟುಂಬಗಳ ಸಾರ್ವತ್ರಿಕ ಆರೋಗ್ಯ ಸಮೀಕ್ಷೆ ನಡೆಸಲಾಗುತ್ತಿದೆ. ಬೂತ್ ಮಟ್ಟದ,  ಮತಗಟ್ಟೆ ಮಟ್ಟದ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಿರುವ ಸರ್ಕಾರಿ, ಅನುದಾನಿತ, ಖಾಸಗಿ ಮತ್ತು  ಬಿಬಿಎಂಪಿ ಶಾಲೆಗಳ ಶಿಕ್ಷಕರನ್ನೊಳಗೊಂಡ ಆರೋಗ್ಯ ಸಮೀಕ್ಷೆ ತಂಡವನ್ನು ರಚಿಸಲಾಗಿದೆ ಎಂದು ಬಿಬಿಎಂಪಿಯ ಆರೋಗ್ಯ ವಿಭಾಗದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. 

‘ಸಮೀಕ್ಷಾ ತಂಡವು ಮನೆ-ಮನೆಗೂ ಭೇಟಿ ನೀಡಿ, ಕುಟುಂಬದ ಸದಸ್ಯರ ಆರೋಗ್ಯ ಮಾಹಿತಿ ಕಲೆ ಹಾಕಲಿದೆ. 500 ಮನೆಗಳಿರುವ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಮೂವರ ತಂಡ, 300ರಿಂದ 500 ಮನೆಗಳಿರುವ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಇಬ್ಬರು ಸಮೀಕ್ಷಕರು ಹಾಗೂ 300ಕ್ಕಿಂತ ಕಡಿಮೆ  ಮನೆಗಳಿರುವ ಕಡೆ ಒಬ್ಬ ಸಮೀಕ್ಷಕ ಮಾಹಿತಿ ಕಲೆಹಾಕಲಿದ್ದಾರೆ. ಒಂದೆರಡು ವಾರಗಳಲ್ಲಿ ಸಮೀಕ್ಷೆ ಪೂರ್ಣಗೊಳ್ಳಲಿದೆ’ ಎಂದು ತಿಳಿಸಿದರು.

ಮನೆಗೆ ಭೇಟಿ ನೀಡುವ ಸಮೀಕ್ಷಕರು ಕೇಳುವ ಮಾಹಿತಿಯನ್ನು ಸಾರ್ವಜನಿಕರು ಹಂಚಿಕೊಳ್ಳಬೇಕು. ನಗರದಿಂದ ಕೋವಿಡ್-19 ಅನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಈ ಕಾರ್ಯದಲ್ಲಿ ಕೈ ಜೋಡಿಸಬೇಕು ಎಂದು ಬಿಬಿಎಂಪಿ ಕೋರಿದೆ.

SCROLL FOR NEXT