ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 
ರಾಜ್ಯ

ವಿದೇಶದಿಂದ ಪ್ರಯಾಣಿಕರ ಆಗಮನ ಹಿನ್ನೆಲೆ: ಸಚಿವರುಗಳಿಂದ ಪರೀಕ್ಷೆ, ಸ್ಕ್ರೀನಿಂಗ್ ಸಿದ್ಧತೆಗಳ ಪರಿಶೀಲನೆ

ವಿದೇಶದಲ್ಲಿರುವ ಕನ್ನಡಿಗರು ಮೇ 11ರಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದರು.

ಬೆಂಗಳೂರು: ವಿದೇಶದಲ್ಲಿರುವ ಕನ್ನಡಿಗರು ಮೇ 11ರಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದರು.

ವಿಮಾನ ನಿಲ್ದಾಣ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಕೈಗೊಳ್ಳಬೇಕಾಗಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅಗತ್ಯ ಸೂಚನೆ ಮತ್ತು ಮಾರ್ಗದರ್ಶನವನ್ನು ನೀಡಿದರು.

ಕೇಂದ್ರ ಸರ್ಕಾರ ನೀಡಿರುವ ಮಾಹಿತಿ ಪ್ರಕಾರ ಒಟ್ಟು 6 ಸಾವಿರದ 500ಕ್ಕೂ ಅಧಿಕ ಪ್ರಯಾಣಿಕರು ಆಗಮಿಸುವ ನಿರೀಕ್ಷೆ ಇದ್ದು, ಅವರೆಲ್ಲರನ್ನು ತಪಾಸಣೆ ನಡೆಸಿ ಎರಡು ಹಂತದ ಪರೀಕ್ಷೆಗೆ ಒಳಪಡಿಸಲಾಗುವುದು. ಅವರಿಗೆ ಯಾವುದೇ ಸೋಂಕು ಇಲ್ಲ ಎಂಬುದು ದೃಢಪಟ್ಟ ನಂತರವಷ್ಟೇ ಮನೆಗೆ ಕಳುಹಿಸಲಾಗುವುದು ಎಂದು ಸಚಿವ ಸುಧಾಕರ್ ತಿಳಿಸಿದರು.

ನಿವಾಸಿಗಳಿಗೆ ಆತಂಕ ಬೇಡ: ಒಟ್ಟು ಹದಿನಾಲ್ಕು ದಿನಗಳ ಕಾಲ ಎಲ್ಲ ಪ್ರಯಾಣಿಕರನ್ನು ಕಡ್ಡಾಯವಾಗಿ ಕ್ವಾರಂಟೈನ್ ನಲ್ಲಿ ಇರಿಸಲಾಗುವುದು. ಅದಕ್ಕಾಗಿ ಹೋಟೆಲ್ ಗಳು, ಶಾಲಾ ಕಾಲೇಜು, ಹಾಸ್ಟೆಲ್ ಮತ್ತಿತರ ಕಡೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇವರನ್ನು ಕ್ವಾರಂಟೈನ್ ನಲ್ಲಿ ಇರಿಸುವುದರಿಂದ ಸಾರ್ವಜನಿಕರಿಗಾಗಲಿ ಅಕ್ಕಪಕ್ಕದವರಿಗೆ ಯಾವುದೇ ತೊಂದರೆ ಆಗುವುದಿಲ್ಲ ಈ ಬಗ್ಗೆ ಯಾರಿಗೂ ಆತಂಕವಾಗಲೀ ಭಯವಾಗಲಿ ಬೇಡ ಎಂದು ಸಚಿವರು ಮಾಹಿತಿ ನೀಡಿದರು.

ನಿನ್ನೆ ನಡೆದ ಟಾಸ್ಕ್ ಫೋರ್ಸ್ ಸಭೆಯಲ್ಲಿ ಕೈಗೊಳ್ಳಬೇಕಾಗಿರುವ ಅಗತ್ಯ ಕ್ರಮಗಳು, ಅದಕ್ಕೆ ಮಾಡಿಕೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಕೂಲಂಕುಷವಾಗಿ ಚರ್ಚೆ ನಡೆಸಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಕುರಿತು ಅಗತ್ಯ ಸೂಚನೆಗಳನ್ನು ನೀಡಿದ್ದು, ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಮಾರ್ಗದರ್ಶನ ನೀಡಿದ್ದಾರೆ. ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಯಾರಿಗೂ ಆತಂಕ ಬೇಡ ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಇಲಾಖೆಯ ಸಿಬ್ಬಂದಿ ಪ್ರಯಾಣಿಕರ ಸುರಕ್ಷತೆ ಹಾಗೂ ರಕ್ಷಣೆಗಾಗಿ ಎಲ್ಲ ಕ್ರಮಗಳನ್ನು ಕೈಗೊಂಡಿದ್ದಾರೆ, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಲ್ಲ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ವಿಮಾನ ನಿಲ್ದಾಣದ ಪರಿಶೀಲನೆ ವೇಳೆ ಗ್ರಾಮಾಂತರ ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು ಸಚಿವರಿಗೆ ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT