ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಸ್ನೇಹಿತರಿಂದ ಯುವಕನ ಕೊಲೆ

ಐದು ದಿನಗಳ ಹಿಂದಷ್ಟೇ ಜೈಲಿನಿಂದ ಜಾಮೀನಿನ ಮೇಲೆ ಹೊರಬಂದಿದ್ದ ಯುವಕನನ್ನು ಆತನ ಸ್ನೇಹಿತರೇ ಡ್ರಾಗರ್ ನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಾಮರಾಜಪೇಟೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಬೆಂಗಳೂರು: ಐದು ದಿನಗಳ ಹಿಂದಷ್ಟೇ ಜೈಲಿನಿಂದ ಜಾಮೀನಿನ ಮೇಲೆ ಹೊರಬಂದಿದ್ದ ಯುವಕನನ್ನು ಆತನ ಸ್ನೇಹಿತರೇ ಡ್ರಾಗರ್ ನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಾಮರಾಜಪೇಟೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಚಾಮರಾಜಪೇಟೆಯ ಕೆಂಪೇಗೌಡನಗರದ ಅರುಣ್(20)ಎಂದು ಕೊಲೆಯಾದವರನ್ನು ‌ಗುರುತಿಸಲಾಗಿದೆ. ಈ ಮೊದಲು ಅಶ್ವಥ್‍ಕಟ್ಟೆಯ ಬಂಡೆ ಗುಡಿಸಲು ಪ್ರದೇಶದಲ್ಲಿ ವಾಸವಾಗಿದ್ದ ಅರುಣ್ ತದನಂತರ ಕೆಂಪೇಗೌಡನಗರಕ್ಕೆ ಮನೆಯನ್ನು ಬದಲಾಯಿಸಿದ್ದ. ಕಳೆದ ಐದು ದಿನಗಳ ಹಿಂದಷ್ಟೇ ಜೈಲಿನಿಂದ ಹೊರಬಂದಿದ್ದ ಈತ ಶುಕ್ರವಾರ ರಾತ್ರಿ 7.30ರ ಸುಮಾರಿನಲ್ಲಿ ಸ್ನೇಹಿತರನ್ನು ಮಾತನಾಡಿಸಲು ಬಂಡೆಗುಡಿಸಲು ಪ್ರದೇಶಕ್ಕೆ ಅರುಣ್ ತೆರಳಿದ್ದ.

ಈ ಸಂದರ್ಭದಲ್ಲಿ ಕ್ಷುಲ್ಲಕ ವಿಚಾರವಾಗಿ ಸ್ನೇಹಿತರ ನಡುವೆ ಜಗಳವಾಗಿದೆ. ಈ ವೇಳೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋದಾಗ ಸ್ನೇಹಿತರೆಲ್ಲ ಸೇರಿ ಡ್ರಾಗರ್ ನಿಂದ ಅರುಣ್ ದೇಹದ ಹಲವು ಕಡೆ ಮನಬಂದಂತೆ ಇರಿದು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಚಾಮರಾಜಪೇಟೆ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ಕೈಗೊಂಡಿದ್ದಾರೆ. ಅರುಣ್ ಹುಡುಗರನ್ನು ಕಟ್ಟಿಕೊಂಡು ರೌಡಿ ಚಟುವಟಿಕೆ ನಡೆಸುತ್ತಿದ್ದ.

ಈತನ ವಿರುದ್ಧ ಚಾಮರಾಜಪೇಟೆ ಮತ್ತು ಕಾಮಾಕ್ಷಿಪಾಳ್ಯದಲ್ಲಿ ಸಣ್ಣಪುಟ್ಟ ಪ್ರಕರಣಗಳಿದ್ದು ಹಳೆ ದ್ವೇಷ ದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ