ರಾಜ್ಯ

ಕೊರೋನಾ ವಿರುದ್ಧ ಕ್ರಮ: ವೈದ್ಯಕೀಯ ವ್ಯವಸ್ಥೆ ಬಲಪಡಿಸಿ, ಮೃತರ ಸಂಖ್ಯೆ ಇಳಿಸುವತ್ತ ರಾಜ್ಯ ಸರ್ಕಾರದ ಚಿತ್ತ

Manjula VN

ಬೆಂಗಳೂರು: ರಾಜ್ಯದ ನಿದ್ದೆ ಕೆಡಿಸಿರುವ ಮಹಾಮಾರಿ ಕೊರೋನಾ ವಿರುದ್ಧ ದಿಟ್ಟ ಕ್ರಮಗಳನ್ನು ಕೈಗೊಳ್ಳುತ್ತಿರುವ ಸರ್ಕಾರ, ವೈದ್ಯಕೀಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿ ಮೃತರ ಸಂಖ್ಯೆಯನ್ನು ಇಳಿಕೆ ಮಾಡಲು ನಿರ್ಧಾರ ಕೈಗೊಂಡಿದೆ. 

ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಅವರು ಈ ನಿರ್ಧಾರ ಕೈಗೊಂಡಿದ್ದಾರೆಂದು ತಿಳಿದುಬಂದಿದೆ. ಸಭೆಯಲ್ಲಿ ಜವೈದ್ ಅಖ್ತರ್, ಪಂಕಜ್ ಕುಮಾರ್ ಕೂಡ ಭಾಗವಿಸಿದ್ದರು. 

ವೈದ್ಯಕೀಯ ವ್ಯವಸ್ಥೆಯನ್ನು ಬಲಪಡಿಸಿ, ಚಿಂತಾಜನಕ ಸ್ಥಿತಿಯಲ್ಲಿರುವ ರೋಗಿಗಳಿಗೆ ಶೀಘ್ರಗತಿಯಲ್ಲಿ ಚಿಕಿತ್ಸೆ ನೀಡುವ ಅಗತ್ಯವಿದೆ. ಇದರಿಂದ ಕೊರೋನಾದಿಂದ ಸಾವನ್ನಪ್ಪುವ ಸಂಖ್ಯೆ ಕೂಡ ನಿಯಂತ್ರಣಕ್ಕೆ ಬರಲಿದೆ. ಐಸಿಯು ನಲ್ಲಿರುವ ರೋಗಿಗಳ ಬಗ್ಗೆ ಹೆಚ್ಚಿನ ನಿಗಾವಹಿಸುವಂತೆ ಎಲ್ಲಾ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಅಗತ್ಯ ಚಿಕಿತ್ಸೆಗಳನ್ನು ನೀಡಬೇಕಿದೆ. ಸಿಸಿಎಸ್'ಟಿ ತಂಡದೊಂದಿಗೆ ಮಾಕುತೆ ನಡೆಸಲು ಸಮಿತಿಯೊಂದನ್ನೂ ಕೂಡ ರಚನೆ ಮಾಡಲಾಗಿದೆ ಎಂದು ವಿಜಯ್ ಭಾಸ್ಕರ್ ಅವರು ತಿಳಿಸಿದ್ದಾರೆ. 

ತಂಡದಲ್ಲಿರುವ ತಜ್ಞ ವೈದ್ಯರು ಎಲ್ಲಾ ರೋಗಿಗಳಿಗೆ ಆಕ್ಸಿಮೀಟರ್ ಬಳಕೆಗೆ ಶಿಫಾರಸ್ಸು ಮಾಡಿದ್ದು, ಸಿಸಿಎಸ್'ಟಿ ಮೂಲಕ ಎಲ್ಲಾ ರೋಗಿಗಳನ್ನು ಆಗಾಗ ಪರಿಶೀಲನೆ ನಡೆಸುವ ಅಗತ್ಯವಿದೆ ಎಂದು ಜಾವೈದ್ ಅಖ್ತರ್ ಅವರು ಹೇಳಿದ್ದಾರೆ. 

ಶ್ವಾಸಕೋಶದಲ್ಲಿ ಸಮಸ್ಯೆ ಇರುವವರು ಕೊರೋನಾ ಪರೀಕ್ಷೆಯನ್ನು ಮಾಡಿಸಿಕೊಳ್ಲಬೇಕು. ಸರ್ಕಾರಿ ಆಸ್ಪತ್ರೆಗಳ ಮೇಲಿನ ಒತ್ತಡ ಕಡಿಮೆ ಮಾಡುವ ಸಲುವಾಗಿ ಖಾಸಿ ಆಸ್ಪತ್ರೆಗಳಲ್ಲಿಯೂ ಪರೀಕ್ಷೆಗಳನ್ನು ಆರಂಭಿಸಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

SCROLL FOR NEXT