ರಾಜ್ಯ

ಮೇ.30ರೊಳಗೆ ಪದವಿ ಕೋರ್ಸ್ ಗಳ ಪಠ್ಯವನ್ನು ಆನ್ ಲೈನ್ ನಲ್ಲಿ ಪೂರ್ಣಗೊಳಿಸಿ: ಸಿ ಎನ್ ಅಶ್ವಥ ನಾರಾಯಣ

Sumana Upadhyaya

ಬೆಂಗಳೂರು: ಪದವಿ ಕೋರ್ಸ್ ಗಳ ಪಠ್ಯಗಳನ್ನು ಕಾಲಕ್ಕೆ ಸರಿಯಾಗಿ ಪೂರ್ಣಗೊಳಿಸಲು ಎಲ್ಲಾ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳಿಗೆ ಆನ್ ಲೈನ್ ನಲ್ಲಿ ವಿದ್ಯಾರ್ಥಿಗಳಿಗೆ ತರಗತಿ ನಡೆಸಿ ಮೇ 30ರೊಳಗೆ ಪಠ್ಯಗಳನ್ನು ಮುಗಿಸುವಂತೆ ಉನ್ನತ ಶಿಕ್ಷಣ ಸಚಿವ ಸಿ ಎನ್ ಅಶ್ವಥ ನಾರಾಯಣ ಹೇಳಿದ್ದಾರೆ.

ಅವರು ನಿನ್ನೆ ವಿಡಿಯೊ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳನ್ನು ಉದ್ದೇಶಿಸಿ ಮಾತನಾಡಿ, ಮೇ 17ರ ನಂತರ ಕೋವಿಡ್ -19 ಪರಿಸ್ಥಿತಿ ನೋಡಿಕೊಂಡು ಪರೀಕ್ಷೆಗಳನ್ನು ನಡೆಸುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸರ್ಕಾರಿ ಕಾಲೇಜುಗಳಲ್ಲಿ ಈಗಾಗಲೇ ಬೋಧಕ ಸಿಬ್ಬಂದಿ ಕಾಲೇಜುಗಳಿಗೆ ಹೋಗುತ್ತಿದ್ದಾರೆ. ಇದೇ ರೀತಿ ಖಾಸಗಿ ವಿಶ್ವವಿದ್ಯಾಲಯಗಳ ಬೋಧಕರೂ ಕೂಡ ಕಾಲೇಜುಗಳಿಗೆ ಹೋಗಿ ಆನ್ ಲೈನ್ ನಲ್ಲಿ ವಿದ್ಯಾರ್ಥಿಗಳಿಗೆ ಬೋಧಿಸಬೇಕು. ಒಂದೇ ರೀತಿ ಪಠ್ಯಕ್ರಮಗಳನ್ನು ಜಾರಿಗೊಳಿಸುವ ಸಂಬಂಧ ಅಧ್ಯಯನ ನಡೆಸಲು ಮತ್ತು ಅಧ್ಯಯನಕ್ಕೆ ರಾಜ್ಯಾದ್ಯಂತ ವಿದ್ಯಾರ್ಥಿಗಳಿಗೆ ವಿಷಯಗಳನ್ನು ಪೂರೈಸುವ ಸಂಬಂಧ ಅಧ್ಯಯನ ಮಾಡಲು ರಚಿಸಲಾಗಿರುವ ಸಮಿತಿ 15 ದಿನಗಳೊಳಗೆ ವರದಿ ಸಲ್ಲಿಸುವಂತೆ ಸಚಿವರು ಇದೇ ಸಂದರ್ಭದಲ್ಲಿ ಆದೇಶ ನೀಡಿದರು.

SCROLL FOR NEXT