ಕೊರೋನಾ ರೋಗಿ 
ರಾಜ್ಯ

ರಾಜ್ಯದಲ್ಲಿ ಇಂದು ಹೊಸದಾಗಿ 54 ಜನರಿಗೆ ಸೋಂಕು: ಒಟ್ಟು ಸೋಂಕಿತರ ಸಂಖ್ಯೆ 848ಕ್ಕೆ ಏರಿಕೆ

ರಾಜ್ಯದಲ್ಲಿ ಇಂದು ಹೊಸದಾಗಿ 54 ಜನರಲ್ಲಿ ಕೊರೋನಾವೈರಸ್ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 848ಕ್ಕೆ ಏರಿಕೆ ಆಗಿದೆ. ಈ ಪೈಕಿ 31 ರೋಗಿಗಳು ಮೃತಪಟ್ಟಿದ್ದು, 422 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಿದೆ.

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾವೈರಸ್ ಆರ್ಭಟ ಮುಂದುವರೆದಿದೆ.ಇಂದು ಹೊಸದಾಗಿ 54 ಜನರಲ್ಲಿ ಕೊರೋನಾವೈರಸ್ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 848ಕ್ಕೆ ಏರಿಕೆ ಆಗಿದೆ. ಈ ಪೈಕಿ 31 ರೋಗಿಗಳು ಮೃತಪಟ್ಟಿದ್ದು, 422 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಿದೆ.

ಕೋವಿಡ್- 19 ಪೀಡಿತ ಒಟ್ಟು 394 ರೋಗಿಗಳಲ್ಲಿ 388 ರೋಗಿಗಳು ಗೊತ್ತುಪಡಿಸಿದ ಆಸ್ಪತ್ರೆಗಳ ಪ್ರತ್ಯೇಕ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಹಾಗೂ 06 ವ್ಯಕ್ತಿಗಳನ್ನು ಐಸಿಯುನಲ್ಲಿ ಇಡಲಾಗಿದೆ. 

ಬೆಂಗಳೂರು ನಗರದಲ್ಲಿ 3,  ಉತ್ತರ ಕನ್ನಡ ಜಿಲ್ಲೆ ಭಟ್ಕಳದಲ್ಲಿ  7,  ಕಲಬುರಗಿಯಲ್ಲಿ 4,  ಬೆಳಗಾವಿಯಲ್ಲಿ 22,  ಚಿಕ್ಕಬಳ್ಳಾಪುರ , ದಾವಣಗೆರೆಯಲ್ಲಿ ತಲಾ 1, ಶಿವಮೊಗ್ಗ 8, ಬಾಗಲಕೋಟೆಯಲ್ಲಿ 8 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 

ಶನಿವಾರ ಸಂಜೆ ಬೆಂಗಳೂರು ನಗರ ನಿವಾಸಿಯಾಗಿದ್ದ 56 ವರ್ಷದ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ.ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 848ಕ್ಕೇರಿಕೆಯಾಗಿದೆ. ಇಲ್ಲಿಯವರೆಗೆ 31 ಜನರು ಮೃತಪಟ್ಟಿದ್ದು, 422 ಮಂದಿ ಗುಣಮುಖರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT