ಆಶಾ ಕಾರ್ಯಕರ್ತರು 
ರಾಜ್ಯ

ಮಂಗಳೂರು: ಆಶಾ ಕಾರ್ಯಕರ್ತೆ ಮೇಲೆ ಮಂತ್ರವಾದಿಯಿಂದ ಪೊರಕೆಯಿಂದ ಹಲ್ಲೆ

ಮನೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಸೇರುತ್ತಿದ್ದ ಜನರ ಬಗ್ಗೆ ವಿಚಾರಿಸಿದ್ದಕ್ಕೆ ಆಶಾ ಕಾರ್ಯಕರ್ತೆ ಮೇಲೆ ಪೊರಕೆಯಲ್ಲಿ ಹಲ್ಲೆಗೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಎಂಬಲ್ಲಿ ಸಂಭವಿಸಿದೆ.

ಮಂಗಳೂರು: ಮನೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಸೇರುತ್ತಿದ್ದ ಜನರ ಬಗ್ಗೆ ವಿಚಾರಿಸಿದ್ದಕ್ಕೆ ಆಶಾ ಕಾರ್ಯಕರ್ತೆ ಮೇಲೆ ಪೊರಕೆಯಲ್ಲಿ ಹಲ್ಲೆಗೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಎಂಬಲ್ಲಿ ಸಂಭವಿಸಿದೆ.

ಶ್ರೀಮತಿ ಎಂಬ ಮಹಿಳೆಯಿಂದ ಆಶಾ ಕಾರ್ಯಕರ್ತೆಗೆ ಹಲ್ಲೆ ಯತ್ನ ನಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಶ್ರೀಮತಿಯ ಪತಿ ವಿಶ್ವನಾಥ ಎಂಬಾತನಿಂದ ಮನೆಯಲ್ಲಿ ಮಂತ್ರವಾದಿ ಕಾರ್ಯಗಳು ನಡಯುತ್ತಿದ್ದು, ಹೀಗಾಗಿ ಇವರ ಮನೆಗೆ ಹತ್ತಾರು ಜನ ಬರುತ್ತಿದ್ದರು. ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಜನ ಸೇರಿದ್ದನ್ನ ಆಶಾ ಕಾರ್ಯಕರ್ತೆ ಪುಷ್ಪಲತಾ ಅವರು ಪ್ರಶ್ನಿಸಿದ್ದಾರೆ.

ಬಳಿಕ ಸ್ಥಳೀಯ ಕುಕ್ಕಿಪಾಡಿ ಪಂಚಾಯತ್ ಸದಸ್ಯರಾದ ಯೋಗೀಶ್ ಆಚಾರ್ಯ ಎಂಬವರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಪಂಚಾಯತ್ ಸದಸ್ಯನ ಮೇಲೂ ಹಲ್ಲೆ ಯತ್ನ ನಡೆದಿದೆ ಅಂತ ಹೇಳಲಾಗುತ್ತಿದೆ. 

ಇದೀಗ ಆಶಾ ಕಾರ್ಯಕರ್ತೆಗೂ ಅವಾಚ್ಯವಾಗಿ ನಿಂದಿಸಿ ಹಲ್ಲೆಗೆ ಮುಂದಾದ ಮಹಿಳೆಯ ಮೇಲೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ