ರಾಜ್ಯ

ಪಾದರಾಯನಪುರದಲ್ಲಿ ಇಂದಿನಿಂದ ಮೊಬೈಲ್ ವ್ಯಾನ್ ಮೂಲಕ ಜನರ ತಪಾಸಣೆ

Manjula VN

ಬೆಂಗಳೂರು: ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ಕೊರೋನಾ ಸೋಂಕಿನ ಪ್ರಕರಣಗಳನ್ನು ಹೊಂದಿರುವ ಪಾದರಾಯನಪುರದಲ್ಲಿ ಇಂದಿನಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪ್ರತಿಯೊಬ್ಬ ವ್ಯಕ್ತಿಯ ಆರೋಗ್ಯ ತಪಾಸಣೆ ನಡೆಸುವ ಸಮಗ್ರ ಯೋಜನೆ ಆರಂಭಿಸಿದೆ.

ಈ ಹಿಂದೆ ಪಾದರಾಯನಪುರದಲ್ಲಿ ರ್‍ಯಾಂಡಮ್ ಪರೀಕ್ಷೆ ನಡೆಸಲಾಗಿತ್ತು. ಈ ಸಮಯದಲ್ಲಿ ಓರ್ವ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದ್ದು, ದಿನದಿಂದ ದಿನಕ್ಕೆ ಈ ವಲಯದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವುದರಿಂದ ತಪಾಸಣಾ ಕ್ರಮವನ್ನು ವಿಸ್ತರಿಸಲಾಗುತ್ತಿದೆ.

ಆರೋಗ್ಯ ಇಲಾಖೆಯ ಮೊಬೈಲ್ ವ್ಯಾನ್ ಮೂಲಕ ಸುಮಾರು 40 ಸಾವಿರ ಮಂದಿಯನ್ನು ಪರೀಕ್ಷೆ ಮಾಡುವ ಯೋಜನೆಯನ್ನು ಸೋಮವಾರದಿಂದ ಆರಂಭಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್ ಮಾಹಿತಿ ನೀಡಿದ್ದಾರೆ.

SCROLL FOR NEXT