ರಾಜ್ಯ

ಲಂಡನ್ ನಿಂದ 326 ಭಾರತೀಯರನ್ನು ಹೊತ್ತ ವಿಮಾನ ಬೆಂಗಳೂರಿಗೆ ಆಗಮನ

Shilpa D

ಬೆಂಗಳೂರು: ಬ್ರಿಟನ್‌ನಲ್ಲಿದ್ದ 326 ಭಾರತೀಯರನ್ನು ಒಳಗೊಂಡ ಏರ್‌ ಇಂಡಿಯಾ ವಿಮಾನವು ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದೆ.

300 ಮಂದಿ ಭಾರತೀಯರು ಮೂರು ನವಜಾತ ಶಿಶುಗಳು ಹಾಗೂ 12 ವಿಮಾನ ಸಿಬ್ಬಂದಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಏರ್ ಇಂಡಿಯಾ ವಿಮಾನವು 100 ನಿಮಿಷಗಳು ತಡವಾಗಿ ಬೆಂಗಳೂರಿಗೆ ತಲುಪಿತು.

ಬೆಳಗ್ಗೆ 4,41 ಕ್ಕೆ  ಪ್ರಯಾಣಿಕರು ಬೆಂಗಗಳೂರು ತಲುಪಿದ್ದಾರೆ. ಬೆಂಗಳೂರಿನಿಂದ ಹೊರಟ 6 ವಿಮಾನಗಳಲ್ಲಿ ಇದೇ ಮೊದಲ ವಿಮಾನ ಬೆಂಗಳೂರಿಗೆ ವಾಪಾಸಾಗಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ, ಆರೋಗ್ಯ ಇಲಾಖೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದ ವತಿಯಿಂದ ಪ್ರಯಾಣಿಕರ ಕೋವಿಡ್-19 ಆರೋಗ್ಯ ತಪಾಸಣೆಗಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಗತ್ಯ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. 

ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರತಿಯೊಬ್ಬರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿದೆ. ಪ್ರತಿಯೊಬ್ಬ ಪ್ರಯಾಣಿಕರೂ ಕ್ವಾರಂಟೈನ್ ನಲ್ಲಿ ಇರುವುದು ಕಡ್ಡಾಯವಾಗಿದೆ. ಹೀಗಾಗಿ ಹೋಟೆಲ್ ಗಳನ್ನು ಬಳಸಲಾಗುತ್ತಿದ್ದು, ಅಲ್ಲಿಯೇ ಕ್ವಾರಂಟೈನ್ ಮಾಡಲಾಗಿದೆ. ಕ್ವಾರಂಟೈನ್ ವೆಚ್ಚವನ್ನು ಪ್ರಯಾಣಿಕರೇ ಭರಿಸಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

SCROLL FOR NEXT