ಸಾಂದರ್ಭಿಕ ಚಿತ್ರ 
ರಾಜ್ಯ

ಭಟ್ಕಳದಲ್ಲಿ ಮತ್ತೆ 7 ಹೊಸ ಕೊರೋನಾ ಪಾಸಿಟಿವ್: ಆತಂಕದಲ್ಲಿ ನಿವಾಸಿಗಳು

ಭಟ್ಕಳದಲ್ಲಿ ಮತ್ತೆ 7 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ 31 ಪ್ರಕರಣಗಳು ಪತ್ತೆಯಾದಂತಾಗಿದೆ‌. ಈ ಪೈಕಿ 11 ಜನ ಈಗಾಗಲೇ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು 20 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾರವಾರ: ಭಟ್ಕಳದಲ್ಲಿ ಮತ್ತೆ 7 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ 31 ಪ್ರಕರಣಗಳು ಪತ್ತೆಯಾದಂತಾಗಿದೆ‌. ಈ ಪೈಕಿ 11 ಜನ ಈಗಾಗಲೇ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು 20 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಟ್ಕಳದಲ್ಲಿ ಶುಕ್ರವಾರವೂ ಸಹ 12 ಪ್ರಕರಣಗಳು ದಾಖಲಾಗಿತ್ತು. ಶನಿವಾರ ಪತ್ತೆಯಾದ ಏಳು ಪ್ರಕರಣಗಳಲ್ಲಿ ಇಬ್ಬರು ಮಕ್ಕಳು ಹಾಗೂ ಮೂವರು ವೃದ್ಧರೂ ಸೇರಿರುವುದು ಆತಂಕ ಹುಟ್ಟಿಸಿದೆ. ಎರಡು ವರ್ಷದ ಆರು ತಿಂಗಳ ಬಾಲಕಿ ಹಾಗೂ ಒಂದು ವರ್ಷ ಐದು ತಿಂಗಳ ಬಾಲಕ ಸೇರಿ ಒಟ್ಟು ಏಳು ಜನರಿಗೆ ಸೊಂಕು ದೃಡಪಟ್ಟಿದ್ದು ಪ್ರಾಥಮಿಕ ಸೋಂಕಿತ ವ್ಯಕ್ತಿಯ
ಕುಟುಂಬಸ್ಥರೊಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ ಎನ್ನಲಾಗಿದೆ.

ಮೇ 6 ರಂದು ಸೋಂಕು ದೃಢಪಟ್ಟ ಯುವತಿ‌ಯ (ಪಿ 659) ಪ್ರಾಥಮಿಕ ಸಂಪರ್ಕದಲ್ಲಿದ್ದ 19 ಜನರ ಪೈಕಿ 12 ಜನರಿಗೆ ಸೋಂಕು ದೃಢಪಟ್ಟಿತ್ತು.‌ ಈ 12 ಜನರ ಸಂಪರ್ಕದಲ್ಲಿದ್ದ ಒಟ್ಟು 55 ಜನರ ಗಂಟಲು ದ್ರವದ ಮಾದರಿಯನ್ನು ಸಹ ಪರೀಕ್ಷೆಗೆ ಕಳುಹಿಸಲಾಗಿತ್ತು. ಇವರಲ್ಲಿ 7 ಮಂದಿಗೆ ಸೋಂಕು ಕಂಡುಬಂದಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video