ರಾಜ್ಯ

ಲಕ್ಷಣಗಳಿಲ್ಲದಿದ್ದರೂ ಹೊರಗಿನಿಂದ ಬರುವವರಿಗೆ ಕ್ವಾರಂಟೈನ್ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

Manjula VN

ಬೆಂಗಳೂರು: ಲಾಕ್ಡೌನ್ ವಿನಾಯಿತಿ ಬೆನ್ನಲ್ಲೇ ರಾಜ್ಯಕ್ಕೆ ಆಗಮಿಸುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯಕ್ಕೆ ಆಗಮಿಸುವ ಎಲ್ಲರನ್ನೂ 14 ದಿನಗಳ ಕಾಲ ಕಡ್ಡಾಯವಾಗಿ ಕ್ವಾರಂಟೈನ್ ಮಾಡುವುದಾಗಿ ರಾಜ್ಯ ಸರ್ಕಾರ ಆದೇಶಿಸಿದೆ. 

ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಇತರೆ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಪ್ರತೀಯೊಬ್ಬರನ್ನೂ ಸಮುದಾಯ ಕೇಂದ್ರಗಳಲ್ಲಿ ಕ್ವಾರಂಟೈನ್ ನಲ್ಲಿರಿಸಲಾಗುವುದು ಎಂದು ಹೇಳಿದೆ. 

ಹೊರ ರಾಜ್ಯಗಳಿಂದ ಬರುವ ಜನರಲ್ಲಿ ಲಕ್ಷಣಗಳಿದ್ದರೂ, ಇಲ್ಲದೇ ಹೋದರೂ ಕೂಡ ಕ್ವಾರಂಟೈನ್ ಕಡ್ಡಾಯ . ಗೋವಾದಿಂದ ವ್ಯಕ್ತಿಯೊಬ್ಬರು ರಾಜ್ಯಕ್ಕೆ ಆಗಮಿಸಿದಾಗ ಜಿಲ್ಲಾ ಉಪ ಆಯುಕ್ತರು ಆ ಬಗ್ಗೆ ಪರಿಶೀಲನೆ ನಡೆಸಿ, ಕ್ವಾರಂಟೈನ್ ವ್ಯವಸ್ಥೆಗಳು ಇಲ್ಲದಿದ್ದರೆ, ಅವರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ನಲ್ಲಿರುವಂತೆ ನೋಡಿಕೊಳ್ಳಬೇಕು. ಪಾವತಿ ಆಧಾರದ ಮೇಲೆ ಹೋಟೆಲ್ ಗಳಲ್ಲಿ ಕ್ವಾರಂಟೈನ್ ಇರುವವರಿಗೆ ಹೋಟೆಲ್ ಕೊಠಡಿಗಳ ಶುಲ್ಕವನ್ನು ಬಿಬಿಎಂಪಿ ಆಯುಕ್ತರೇ ಶೀಘ್ರದಲ್ಲಿಯೇ ನಿಗದಿ ಮಾಡಲಿದ್ದಾರೆಂದು ತಿಳಿಸಿದೆ. 

SCROLL FOR NEXT