ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ ಹೊಸದಾಗಿ 26 ಕೊರೋನಾ ಪ್ರಕರಣ; ಸೋಂಕಿತರ ಸಂಖ್ಯೆ 951ಕ್ಕೇರಿಕೆ

ರಾಜ್ಯದಲ್ಲಿ ಮಂಗಳವಾರ ಸಂಜೆಯಿಂದ ಬುಧವಾರ ಮಧ್ಯಾಹ್ನದವರೆಗೆ ಒಟ್ಟು 26 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿವೆ.

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ಸಂಜೆಯಿಂದ ಬುಧವಾರ ಮಧ್ಯಾಹ್ನದವರೆಗೆ ಒಟ್ಟು 26 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿವೆ.

ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 951 ತಲುಪಿದ್ದು, 32 ಜನರು ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 442 ಮಂದಿ ಗುಣಮುಖರಾಗಿದ್ದಾರೆ.

ಕಲಬುರಗಿಯಲ್ಲಿ 2, ಬೆಂಗಳೂರು ನಗರದಲ್ಲಿ 1, ಉತ್ತರ ಕನ್ನಡ ಜಿಲ್ಲೆಯಲ್ಲಿ 2, ಬಳ್ಳಾರಿಯಲ್ಲಿ 1, ಬೀದರ್ ನಲ್ಲಿ 11, ದಾವಣಗೆರೆಯಲ್ಲಿ 2, ವಿಜಯಪುರದಲ್ಲಿ 2, ದಕ್ಷಿಣ ಕನ್ನಡದಲ್ಲಿ 1, ಹಾಸನದ 4 ಪ್ರಕರಣಗಳು ವರದಿಯಾಗಿವೆ. 

ಜಯಪುರಕ್ಕೆ ಮುಂಬೈಗೆ ಪ್ರಯಾಣ ಬೆಳೆಸಿದ ವ್ಯಕ್ತಿಗಳು, ಹಾಸನಕ್ಕೆ ಪ್ರಯಾಣ ಬೆಳೆಸಿದ ವ್ಯಕ್ತಿಗಳಲ್ಲಿ ಸೋಂಕು ದೃಢಪಟ್ಟಿದೆ. ಉತ್ತರ ಕನ್ನಡದ ಓರ್ವರು ಮಹಾರಾಷ್ಟ್ರದ ರತ್ನಗಿರಿಗೆ ಪ್ರಯಾಣ ಬೆಳೆಸಿದ ಹಿನ್ನೆಲೆಯ ಹೊಂದಿದ್ದಾರೆ.

ಜೊತೆಗೆ, ಕಲಬುರಗಿಯ 60 ವರ್ಷದ ವ್ಯಕ್ತಿಯೋರ್ವರು ಮೃತಪಟ್ಟಿದ್ದಾರೆ. ಇವರು ಆಸ್ಪತ್ರೆಗೆ ಕರೆತರುವ ಮುನ್ನವೇ ಮೃತಪಟ್ಟಿದ್ದರು. ನಂತರ ಅವರಿಗೆ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿತ್ತು ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಆಗ VOLVO, ಈಗ BMW; ಹಾರುಬೂದಿ ಸಾಗಿಸುತ್ತಿದ್ದ ಲಾರಿ ಉರುಳಿ ಐಶಾರಾಮಿ ಕಾರು ಅಪ್ಪಚ್ಚಿ, Video

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

SCROLL FOR NEXT