ನಿಖಿಲ್ ವಿವಾಹಕ್ಕೆ ನೀಡಿದ್ದ ವಾಹನಗಳ ಪಾಸ್ ಸಂಖ್ಯೆ ಎಷ್ಟು? ಮತ್ತೆ ಮಾಹಿತಿ ಕೇಳಿದ ಹೈಕೋರ್ಟ್
ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ವಿವಾಹಕ್ಕೆ ಸಂಬಂಧಿಸಿ ಎಷ್ಟು ವಾಹನಗಳಿಗೆ ಅನುಮತಿ ನೀಡಲಾಗಿತ್ತು ಸ್ಪಷ್ಟನೆ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಖಡಕ್ ಸೂಚನೆ ನೀಡಿದೆ.
ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ವಿವಾಹಕ್ಕೆ ಸಂಬಂಧಿಸಿ ಎಷ್ಟು ವಾಹನಗಳಿಗೆ ಅನುಮತಿ ನೀಡಲಾಗಿತ್ತು ಸ್ಪಷ್ಟನೆ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಖಡಕ್ ಸೂಚನೆ ನೀಡಿದೆ.
ಲಾಕ್ ಡೌನ್ ನಡುವೆ ನಿಖಿಲ್ ವಿವಾಹ ನಡೆದಿತ್ತು. ನಿಖಿಲ್ ಕುಮಾರಸ್ವಾಮಿ ಮದುವೆಯಲ್ಲಿ ಲಾಕ್ಡೌನ್ ಉಲ್ಲಂಘನೆಯಾಗಿದೆ ಎಂದು ಹೈಕೋರ್ಟ್ ಮೌಖಿಕ ಅಭಿಪ್ರಾಯ ಪಟ್ಟಿತ್ತು.
ಜಿಲ್ಲಾಧಿಕಾರಿ ಅನುಮತಿ ನೀಡುವ ವಾಹನಗಳ ಸಂಖ್ಯೆ ನಮೂದಿಸಿ ಇರಲಿಲ್ಲ. ವಿವಾಹದಲ್ಲಿ ಪಾಲ್ಗೊಳ್ಳುವುದಕ್ಕೆ ಜನರ ಮಿತಿ ನಿಗದಿಪಡಿಸಬೇಕು. ಕೇಂದ್ರದ ಮಾರ್ಗಸೂಚಿಯಲ್ಲಿ ಡಿಸಿಗೆ ವಿವಾಹ ನಿಯಂತ್ರಣ ಅಧಿಕಾರವಿತ್ತು. ಆದರೆ ಏ.15. ರ ಮಾರ್ಗಸೂಚಿಯಲ್ಲಿ ವಿವಾಹಕ್ಕೆ ಸಂಖ್ಯಾ ಮಿತಿ ನಿಗದಿಪಡಿಸಿರಲಿಲ್ಲ. ಮೇ.1 ರ ಮಾರ್ಗಸೂಚಿಯಲ್ಲಿ 50 ಜನರ ಮಿತಿ
ನಿಗದಿಪಡಿಸಲಾಗಿತ್ತು. ಈ ಕಾರಣದಿಂ ಏ.17 ರಂದು ನಡೆದ ನಿಖಿಲ್ ವಿವಾಹಕ್ಕೆ ಸಂಖ್ಯಾ ಮಿತಿ ವಿಧಿಸಬೇಕಿತ್ತು ಎಂದು ಹೇಳಿದೆ.
ಮುಂದೆ ಇಂಥ ಲೋಪ ಮರುಕಳಿಸಲಿಲ್ಲ ಎಂದು ಸರ್ಕಾರಿ ವಕೀಲ ವಿಕ್ರಮ್ ಹುಯಿಲಗೋಳ ಹೈಕೋರ್ಟ್ ಗೆ ವಿನಂತಿ ಮಾಡಿಕೊಂಡಿದ್ದಾರೆ. ಆದರೆ ವಾಹನಗಳ ವಿಚಾರದಲ್ಲಿ ಖಡಕ್ ನಿರ್ಧಾರ ತೆಗೆದುಕೊಂಡಿರುವ ಹೈಕೋರ್ಟ್ ಅನುಮತಿ ನೀಡಿದ್ದರ ಬಗ್ಗೆ ವಿವರಣೆ ಕೇಳಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.