ಸಿ.ಎಂ ಯಡಿಯೂರಪ್ಪ 
ರಾಜ್ಯ

ಆತ್ಮ ನಿರ್ಭರ್ ಭಾರತ್ ಆರ್ಥಿಕ ಪುನಶ್ಚೇತನ ಯೋಜನೆಯ ಎರಡನೇ ದಿನದ ಘೋಷಣೆಗಳ ಕುರಿತು ಮುಖ್ಯಮಂತ್ರಿಗಳ ಪ್ರತಿಕ್ರಿಯೆ

ಆತ್ಮ ನಿರ್ಭರ್ ಭಾರತ ಆರ್ಥಿಕ ಪುನಶ್ಚೇತನ ಯೋಜನೆಯೆ ಎರಡನೇ ದಿನದ ಘೋಷಣೆಗಳು, ಪ್ರಧಾನಿ ಮೋದಿ ಅವರಿಗೆ ಬಡವರ ಬಗ್ಗೆ ಇರುವ ಕಾಳಜಿಯನ್ನು ಬಿಂಬಿಸುತ್ತದೆ. ಎಲ್ಲರನ್ನೊಳಗೊಂಡ ಪ್ರಗತಿಯ ಆಶಯವನ್ನು ದೃಢಪಡಿಸುತ್ತದೆ

ಆತ್ಮ ನಿರ್ಭರ್ ಭಾರತ ಆರ್ಥಿಕ ಪುನಶ್ಚೇತನ ಯೋಜನೆಯೆ ಎರಡನೇ ದಿನದ ಘೋಷಣೆಗಳು, ಪ್ರಧಾನಿ ಮೋದಿ ಅವರಿಗೆ ಬಡವರ ಬಗ್ಗೆ ಇರುವ ಕಾಳಜಿಯನ್ನು ಬಿಂಬಿಸುತ್ತದೆ. ಎಲ್ಲರನ್ನೊಳಗೊಂಡ ಪ್ರಗತಿಯ ಆಶಯವನ್ನು ದೃಢಪಡಿಸುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಭಿಪ್ರಾಯಪಟ್ಟಿದ್ದಾರೆ.

ಯಡಿಯೂರಪ್ಪ ಪ್ರತಿಕ್ರಿಯೆಯ ಅಂಶಗಳು ಹೀಗಿವೆ

ವಲಸೆ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಸಣ್ಣ ರೈತರು, ಕೂಲಿ ಕಾರ್ಮಿಕರು ಮೊದಲಾದ ಎಲ್ಲ ಸಮುದಾಯಗಳಿಗೆ ಮೂಲಸೌಲಭ್ಯ ಮತ್ತು ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳು ಶ್ಲಾಘನೀಯ. ರಾಜ್ಯ ಮತ್ತು ಪ್ರಾಂತೀಯ ವಲಯದಲ್ಲಿ ಇರುವ ಕನಿಷ್ಠ ವೇತನ ತಾರತಮ್ಯವನ್ನು ತೆಗೆದು ಹಾಕುವುದು, ತಮ್ಮ ಊರುಗಳಿಗೆ ಹಿಂದಿರುಗಿದ ವಲಸೆ ಕಾರ್ಮಿಕರಿಗೆ ವರದಾನವಾಗಲಿದೆ.

8 ಕೋಟಿ ವಲಸಿಗ ಕಾರ್ಮಿಕರಿಗೆ ಪಡಿತರ ಚೀಟಿ ಇಲ್ಲದಿದ್ದರೂ 3500 ಕೋಟಿ ರೂ. ವೆಚ್ಚದಲ್ಲಿ ಎರಡು ತಿಂಗಳು ಉಚಿತ ಪಡಿತರ ವಿತರಣೆ, ವಲಸೆ ಕಾರ್ಮಿಕರಿಗೆ ಮನೆ ಬಾಡಿಗೆ ದರ ನಿಗದಿ ಮೊದಲಾದ ಕ್ರಮಗಳು ಅವರಿಗೆ ಹೆಚ್ಚಿನ ಭದ್ರತೆಯನ್ನು ನೀಡಲಿದೆ.
 
ಮುದ್ರಾ ಶಿಶು ಸಾಲ ಯೋಜನೆಗೆ ಬಡ್ಡಿ ರಿಯಾಯಿತಿ, ಬೀದಿ ಬದಿ ವ್ಯಾಪಾರಿಗಳಿಗೆ 10 ಸಾವಿರ ರೂ. ವರೆಗೆ  ವಿಶೇಷ ಸಾಲ ಸೌಲಭ್ಯ ಒದಗಿಸಲು 5 ಸಾವಿರ ಕೋಟಿ ಅನುದಾನ ನಿಗದಿ ಪಡಿಸಿರುವುದು ಬೀದಿ ಬದಿ ವ್ಯಾಪಾರಿಗಳು ಮತ್ತು ಸಣ್ಣ ವ್ಯಾಪಾರಿಗಳಿಗೆ ಅನುಕೂಲವಾಗಲಿದೆ.ಮಧ್ಯಮ, ಕೆಳ ಮಧ್ಯಮ ವರ್ಗದವರಿಗೆ ಗೃಹ ಸಾಲ ಸಬ್ಸಿಡಿ ಯೋಜನೆಗೆ 70 ಸಾವಿರ ಕೋಟಿ ರೂ. ನೆರವು ಈ ವರ್ಗದ ಜನರ ಕನಸು ಸಾಕಾರಗೊಳಿಸಲು ನೆರವಾಗಲಿದೆ. ಸಣ್ಣ ಮತ್ತು ಮಧ್ಯಮ ರೈತರಿಗೆ ಬೆಳೆ ಕೊಯ್ಲು ಮತ್ತು ಕೊಯ್ಲೋತ್ತರ ನಿರ್ವಹಣೆಗೆ ರೈತ ನಿಧಿಗೆ ಹೆಚ್ಚುವರಿ 30 ಸಾವಿರ ಕೋಟಿ ರೂ. ಸೇರ್ಪಡೆ

ಸಣ್ಣ ರೈತರು, ಪಶುಪಾಲಕರು ಮತ್ತು ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ನಡಿ 2 ಲಕ್ಷ ಕೋಟಿ ಸಾಲ ಸೌಲಭ್ಯ ನೀಡುವ ಕ್ರಮಗಳು ಸಂಕಷ್ಟಕ್ಕೊಳಗಾದ  ಈ ವಲಯಗಳ ಜನರಿಗೆ ಉಸಿರು ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT