ಮುತ್ತಪ್ಪ ರೈ 
ರಾಜ್ಯ

ಮಾಜಿ ಭೂಗತ ದೊರೆ, ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ನಿಧನ

ಭೂಗತ ಲೋಕದ ಮಾಜಿ ದೊರೆ ಹಾಗೂ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಎನ್.ಮುತ್ತಪ್ಪ ರೈ ಅವರು ಗುರುವಾರ ತಡರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 

ಬೆಂಗಳೂರು: ಭೂಗತ ಲೋಕದ ಮಾಜಿ ದೊರೆ ಹಾಗೂ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಎನ್.ಮುತ್ತಪ್ಪ ರೈ ಅವರು ಗುರುವಾರ ತಡರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 

ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಮೇ.15 ರಂದು ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆಂದು ಹೇಳಲಾಗುತ್ತಿದೆ. 

ಭೂಗತ ಲೋಕಕ್ಕೆ ವಿದಾಯ ಹೇಳಿದ್ದ ಮುತ್ತಪ್ಪ ರೈ ಅವರು, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಇದರಂತೆ ಜಯ ಕರ್ನಾಟಕ ಸಂಘಟನೆಯನ್ನು ಸ್ಥಾಪಿಸಿ ಕಾರ್ಯಪ್ರವೃತ್ತರಾಗಿದ್ದರು. 

ಮೂಲತಃ ಪುತ್ತೂರಿನ ಕೆಯ್ಯೂರು ನಿವಾಸಿಯಾಗಿದ್ದ ಮುತ್ತಪ್ಪ ರೈ ಅವರು ಬೆಂಗಳೂರಿನ ಬಿಡದಿಯಲ್ಲಿ ಜೀವನ ನಡೆಸುತ್ತಿದ್ದರು. 

ಬಿಡದಿಯಲ್ಲಿ ಮುತ್ತಪ್ಪ ರೈ ಅಂತ್ಯಕ್ರಿಯೆ: ಕುಟುಂಬಸ್ಥರಷ್ಟೇ ಭಾಗಿ

ಇಂದು ಮಧ್ಯಾಹ್ನ ಅವರ ಸ್ವಗೃಹ ಬಿಡದಿಯಲ್ಲಿ ಅಂತಿಮ ವಿಧಿ ವಿಧಾನ ಕಾರ್ಯ ನಡೆಯಲಿದ್ದು, ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಕುಟುಂಬದ ಕೆಲವೇ ಮಂದಿಗಷ್ಟೆ ಅಂತಿಮ ಕಾರ್ಯದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran ನಲ್ಲಿ ಕೊನೆಗೂ ಆಡಳಿತ ಬದಲಾವಣೆ! ಅಮೆರಿಕ, ಇಸ್ರೇಲ್ ಬಯಸಿದ್ದೇ ಒಂದು, ಆಗಿದ್ದು ಇನ್ನೊಂದು!

Op Sindoor: ವಿಶ್ವಭೂಪಟದಿಂದ ಪಾಕ್ ನಿರ್ನಾಮಕ್ಕೆ ಕೆಲವೇ ನಿಮಿಷಗಳ ಅಂತರದಲ್ಲಿದ್ದೆವು, ಆದ್ರೆ ಅವರು ತಡೆದರು...: ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ

IPL 2026: ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್; ಲಕ್ನೋ ವಿರುದ್ಧ ಗೆದ್ದು ಬೀಗಿದ ಡೆಲ್ಲಿ

IPL 2026: ಯಾರ್ ಮೇಲಾದ್ರೂ 5 ಸಾವಿರ ಹೂಡಿಕೆ ಮಾಡಿ ನೋಡಿ: LSG ಮಾಲೀಕರ ಕುರಿತು Mohammed Shami ಹೇಳಿಕೆ ವೈರಲ್!

ದೇಶದಲ್ಲೇ ಮೊದಲ ಬಾರಿಗೆ ಡ್ರಗ್ಸ್, ಸಾಮಾಜಿಕ–ಆರ್ಥಿಕ ಜನಗಣತಿ ಆರಂಭಿಸಿದ ಪಂಜಾಬ್: ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ

SCROLL FOR NEXT