ರಾಜ್ಯ

ಸೋಂಕಿನ ಲಕ್ಷಣವಿಲ್ಲದ ಅನ್ಯ ಜಿಲ್ಲೆಗಳಿಂದ ಆಗಮಿಸಿದ ವ್ಯಕ್ತಿಗಳಿಗೆ ಕ್ವಾರಂಟೈನ್ ಇಲ್ಲ: ಆರೋಗ್ಯ ಇಲಾಖೆ ಪುನರುಚ್ಚಾರ

Srinivasamurthy VN

ಬೆಂಗಳೂರು: ಅನ್ಯ ಜಿಲ್ಲೆಯಿಂದ ಇನ್ನೊಂದು ಜಿಲ್ಲೆ ಆಗಮಿಸುವ ವ್ಯಕ್ತಿಗಳಲ್ಲಿ ಕೊರೋನಾ ಸೋಂಕಿನ ಲಕ್ಷಣಗಳಿಲ್ಲದಿದ್ದಲ್ಲಿ ಅವರಿಗೆ ಕ್ವಾರಂಟೈನ್ ಮಾಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವಾಲಯ ಪುನರುಚ್ಚರಿಸಿದೆ. 

ರಾಜ್ಯದಲ್ಲಿ ಲಾಕ್ ಡೌನ್ ವಿನಾಯ್ತಿ ಹಿನ್ನೆಲೆಯಲ್ಲಿ ಅಂತರಜಿಲ್ಲೆ ಪ್ರಯಾಣಕ್ಕೆ ಅನುಮತಿ ನೀಡಲಾಗಿದೆ. ಆದರೆ, ಜಿಲ್ಲೆಯಿಂದ ಜಿಲ್ಲೆಗೆ ಪ್ರಯಾಣ ಬೆಳೆಸಿದರೆ ಕ್ವಾರಂಟೈನ್ ಮಾಡಲಾಗುತ್ತದೆ ಎಂಬ ವದಂತಿ ಇದೆ. ಈ ಹಿನ್ನೆಲೆಯಲ್ಲಿ ಈ ಸ್ಪಷ್ಟೀಕರಣ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ  ಆಯುಕ್ತ ಪಂಕಜ್ ಕುಮಾರ್ ಪಾಂಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇವಲ ಹೊರರಾಜ್ಯ ಮತ್ತು ಹೊರಜಿಲ್ಲೆಗಳಿಂದ ವಿಶೇಷ ವಿಮಾನ ಮತ್ತು ರೈಲುಗಳಲ್ಲಿ ಆಗಮಿಸಿದವರಿಗೆ ಮಾತ್ರ ಕ್ವಾರಂಟೈನ್ ಮಾಡಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಹಿಂದೆ, ಅನ್ಯ ಜಿಲ್ಲೆಗಳಿಗೆ ಪ್ರಯಾಣಿಸಿ ಎರಡು ದಿನಗಳಿಗೂ ಹೆಚ್ಚು ಕಾಲ ವಾಸ್ತವ್ಯ ಹೂಡಿದರೆ 14 ದಿನಗಳ ಕಾಲ ಕ್ವಾರಂಟೈನ್ ಮಾಡಲಾಗುವುದು ಎಂಬ ವದಂತಿಯಿತ್ತು. ಇದು ಜನರ ಆತಂಕಕ್ಕೆ ಕಾರಣವಾಗಿತ್ತು.

SCROLL FOR NEXT