ರಾಜ್ಯ

ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ. ಸಹಾಯ ಧನ ವಿತರಣೆಗೆ ಸೋಮಶೇಖರ್ ಚಾಲನೆ

Manjula VN

ಮೈಸೂರು: ಕೋವಿಡ್ 19 ಸಂದರ್ಭದಲ್ಲಿ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂಪಾಯಿಯನ್ನು ಸಹಕಾರ ಇಲಾಖೆ ವತಿಯಿಂದ ಕೊಡುತ್ತಿದ್ದೇವೆ. ಇದಕ್ಕಾಗಿ ಒಟ್ಟು 12 ಕೋಟಿ 37 ಲಕ್ಷ ರೂಪಾಯಿ ಖರ್ಚು ಆಗಲಿದೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ರಾಜ್ಯದ 40,500 ಆಶಾ ಕಾರ್ಯಕರ್ತರಿಗೆ ಅನುಕೂಲವಾಗುವ ತಲಾ 3 ಸಾವಿರ ರೂಪಾಯಿ ಸಹಾಯಧನ ವಿತರಣೆ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ 180 ಜನರಿಗೆ ಮೈಸೂರಿನಲ್ಲಿ ವಿತರಣೆ ಮಾಡುವ ಮೂಲಕ ಸಚಿವರು ಈ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ಕೊರೋನಾ ವಿರುದ್ಧ ಹೋರಾಡಿದ ರಾಜ್ಯದ ಎಲ್ಲ ಆಶಾ ಕಾರ್ಯಕರ್ತೆಯರಿಗೆ ಸಹಾಯಧನ ವಿತರಣೆ ಮಾಡುವ ಬಗ್ಗೆ ಮುಖ್ಯಮಂತ್ರಿಗಳು ಕೇಳಿದಾಗ ಇಲಾಖೆ ವತಿಯಿಂದಲೇ ಹಣವನ್ನು ಭರಿಸುವುದಾಗಿ ತಿಳಿಸಿದೆ. ನಂತರ ಶುಕ್ರವಾರ ಮುಖ್ಯಮಂತ್ರಿಗಳು ಸಹಾಯಧನದ ಬಗ್ಗೆ ಘೋಷಿಸಿದರು ಎಂದರು.

SCROLL FOR NEXT