ಸಾಂದರ್ಭಿಕ ಚಿತ್ರ 
ರಾಜ್ಯ

ವಿಶೇಷ ಪ್ಯಾಕೇಜ್ ಅನುಷ್ಠಾನ ಆರಂಭ: ಹೂ ಬೆಳೆಗಾರರಿಂದ ಅರ್ಜಿ ಆಹ್ವಾನ

ಕೊವಿಡ್-19 ಕಾರಣ ದೇಶದಲ್ಲಿ ವಿಧಿಸಿದ ಲಾಕ್‍ಡೌನ್ ನಿಂದ ಹೂವಿನ ಬೆಳೆಗಾರರಿಗೆ ಉಂಟಾದ ನಷ್ಟಕ್ಕೆ ಪರಿಹಾರ ನೀಡುವ ಬಗ್ಗೆ ಕರ್ನಾಟಕ ಸರ್ಕಾರವು ಹೂವಿನ ಬೆಳೆ ಬೆಳೆದಿರುವ ರೈತರಿಗೆ ಪ್ರತೀ ಹೆಕ್ಟೇರಿಗೆ(ಎರಡೂವರೆ ಎಕರೆ) ಗರಿಷ್ಠ ರೂ. 25000 ಗಳಂತೆ ಪರಿಹಾರ ನೀಡಲು ಕಾರ್ಯಕ್ರಮ ಜಾರಿಗೆ ತಂದಿದೆ. ಆದ್ದರಿಂದ ಅರ್ಹ ಬೆಳೆಗಾರರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಂಗಳೂರು: ಕೊವಿಡ್-19 ಕಾರಣ ದೇಶದಲ್ಲಿ ವಿಧಿಸಿದ ಲಾಕ್‍ಡೌನ್ ನಿಂದ ಹೂವಿನ ಬೆಳೆಗಾರರಿಗೆ ಉಂಟಾದ ನಷ್ಟಕ್ಕೆ ಪರಿಹಾರ ನೀಡುವ ಬಗ್ಗೆ ಕರ್ನಾಟಕ ಸರ್ಕಾರವು ಹೂವಿನ ಬೆಳೆ ಬೆಳೆದಿರುವ ರೈತರಿಗೆ ಪ್ರತೀ ಹೆಕ್ಟೇರಿಗೆ(ಎರಡೂವರೆ ಎಕರೆ) ಗರಿಷ್ಠ ರೂ. 25000 ಗಳಂತೆ ಪರಿಹಾರ ನೀಡಲು ಕಾರ್ಯಕ್ರಮ ಜಾರಿಗೆ ತಂದಿದೆ. ಆದ್ದರಿಂದ ಅರ್ಹ ಬೆಳೆಗಾರರರಿಂದ ಅರ್ಜಿ ಆಹ್ವಾನಿಸಲಾಗಿದೆ.

2019-20 ನೇ ಸಾಲಿನಲ್ಲಿ ಕೈಗೊಂಡ ಬೆಳೆ ಸಮೀಕ್ಷೆ ದತ್ತಾಂಶಗಳ ಆಧಾರದಲ್ಲಿ ದಾಖಲಾದ ರೈತರಿಗೆ ಪರಿಹಾರ ನೀಡಲು ಕ್ರಮವಹಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆಯಾ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಬೆಳೆ ಸಮೀಕ್ಷಾ ದತ್ತಾಂಶದಂತೆ ಹೂವಿನ ಬೆಳೆ ಬೆಳೆದಿರುವ ರೈತರ ವಿವರಗಳನ್ನು ಸಾರ್ವಜನಿಕರ ಅವಗಾಹನೆಗೆ ಪ್ರಕಟಪಡಿಸಲಾಗುತ್ತಿದೆ. ಈ ಪಟ್ಟಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಮೇ 23 ರೊಳಗೆ ತಮ್ಮ ಆಕ್ಷೇಪಣೆಗಳನ್ನು ಬರಹ ಮೂಲಕ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಅಥವಾ ಆಯಾ ರೈತ ಸಂಪರ್ಕ ವ್ಯಾಪ್ತಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಸಲ್ಲಿಸಬೇಕು.

ಪಟ್ಟಿಯಲ್ಲಿ ಯಾವುದೇ ಕಾರಣಕ್ಕೆ ಬಿಟ್ಟು ಹೋದ ಹೂವಿನ ಬೆಳೆ ಕೈಗೊಂಡಿರುವ ಕೃಷಿಕರು ನಿಗಧಿತ ನಮೂನೆಯಲ್ಲಿ ಹೂವಿನ ಬೆಳೆ ಬೆಳೆದಿರುವ ಜಮೀನಿನ ಆರ್.ಟಿ.ಸಿ ಯೊಂದಿಗೆ ಆಧಾರ್ ಕಾರ್ಡ್, ಸ್ವಯಂ ದೃಢೀಕೃತ ಘೋಷಣಾ ಪ್ರಮಾಣ ಪತ್ರ, ರೈತರ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿಗಳನ್ನು ಸಲ್ಲಿಸಬೇಕು.

ಜಂಟಿ ಖಾತೆಯಾಗಿದ್ದಲ್ಲಿ ಅಥವಾ ಜಮೀನಿನ ಒಡೆತನ ಹೊಂದಿದವರು ಮರಣ ಹೊಂದಿರುವ ಸಂದರ್ಭದಲ್ಲಿ ಸೂಕ್ತ ದೃಢೀಕರಣಗಳೊಂದಿಗೆ ಅರ್ಜಿಯನ್ನು ಮೇ 26 ರೊಳಗೆ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಅಥವಾ ಆಯಾ ರೈತ ಸಂಪರ್ಕ ವ್ಯಾಪ್ತಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಸಲ್ಲಿಸಬೇಕು. 
ತಾಲೂಕು ಹಾಗೂ ಜಿಲ್ಲಾ ಸಮಿತಿಗಳಿಂದ ಅನುಮೋದಿತವಾದ ಎಲ್ಲಾ ಫಲಾನುಭವಿಗಳಿಗೆ ಹೂವಿನ ಬೆಳೆ ಆವರಿಸಿರುವ ಪ್ರದೇಶಕ್ಕೆ ಪ್ರತೀ ಸೆಂಟ್ಸ್ ಸ್ಥಳಕ್ಕೆ ರೂ. 100 ರಂತೆ ಗರಿಷ್ಠ ಎರಡೂವರೆ ಎಕರೆಗೆ ರೂ 25000 ಗರಿಷ್ಠ ಪರಿಹಾರಧನವನ್ನು ಬೆಳೆಗಾರರ ಆಧಾರ್‌ ಕಾರ್ಡ್‌ಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಸಂದಾಯ ಮಾಡಲಾಗುವುದು. ಹೆಚ್ಚಿನ ವಿವರಗಳಿಗೆ ಸಮೀಪದ ತೋಟಗಾರಿಕೆ ಕಚೇರಿಗಳನ್ನು ಸಂಪರ್ಕಿಸಬಹುದು.

ತೋಟಗಾರಿಕೆ ಉಪನಿರ್ದೇಶಕರು, ದ.ಕ.ಜಿ.ಪಂ., ಮಂಗಳೂರು - 9448999226, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಮಂಗಳೂರು -8277806378 (0824-2423615), ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಬಂಟ್ವಾಳ – 8277806371 (08255-234102), ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಪುತ್ತೂರು – 9731854527 (08251-230905), ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಸುಳ್ಯ - 9880993238 (08257-232020), ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಬೆಳ್ತಂಗಡಿ 8277806380 (08256-232148) ಇವರನ್ನು ಸಂಪರ್ಕಿಸಲು ತೋಟಗಾರಿಕೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT