ಸಾಂದರ್ಭಿಕ ಚಿತ್ರ 
ರಾಜ್ಯ

ರಾಮನಗರ: ಮಲಗಿದ್ದ ವೃದ್ಧೆ ಚಿರತೆಗೆ ಬಲಿ

ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ‌ಮತ್ತೆ ಚಿರತೆ ಅಟ್ಟಹಾಸ ಮೆರೆದಿದೆ. ಮನೆಯ ಹೊರಗಡೆ ಮಲಗಿದ್ದ ವೃದ್ಧೆ ಮೇಲೆ ಚಿರತೆಯೊಂದು ದಾಳಿ ಮಾಡಿ ಕೊಂದು ಹಾಕಿರುವ ಘಟನೆ ಮಾಗಡಿ ತಾಲ್ಲೂಕಿನ ಕೊತ್ತಗಾನಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ‌ಮತ್ತೆ ಚಿರತೆ ಅಟ್ಟಹಾಸ ಮೆರೆದಿದೆ. ಮನೆಯ ಹೊರಗಡೆ ಮಲಗಿದ್ದ ವೃದ್ಧೆ ಮೇಲೆ ಚಿರತೆಯೊಂದು ದಾಳಿ ಮಾಡಿ ಕೊಂದು ಹಾಕಿರುವ ಘಟನೆ ಮಾಗಡಿ ತಾಲ್ಲೂಕಿನ ಕೊತ್ತಗಾನಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

68 ವರ್ಷದ ಗಂಗಮ್ಮ ಮೃತ ವೃದ್ಧೆ. ಚಿರತೆ ವೃದ್ಧೆಯ ಶವವನ್ನು ಭಾಗಶಃ ತಿಂದಿದ್ದು, ಮನೆಯ ಹತ್ತಿರದಲ್ಲಿ ದೇಹದ ಭಾಗಗಳು ಪತ್ತೆಯಾಗಿವೆ.ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಹಾಗೂ‌ ಮಾಗಡಿ ಪೊಲೀಸರು ಭೇಟಿ ನೀಡಿದ್ದಾರೆ. 

ಕಳೆದ‌ ಶನಿವಾರವಷ್ಟೇ ಮಾಗಡಿ ತಾಲ್ಲೂಕಿನ ಕದರಯ್ಯನ ಪಾಳ್ಯದಲ್ಲಿ ಚಿರತೆಯೊಂದು ಮನೆಯೊಳಗೆ ನುಗ್ಗಿ ಮೂರು ವರ್ಷದ ಬಾಲಕನನ್ನು ಎಳೆದೊಯ್ದು ಕೊಂದು ಹಾಕಿತ್ತು.ಇದೀಗ ಮತ್ತೆ ಚಿರತೆ ದಾಳಿ ಮುಂದುವರೆಸಿದ್ದು, ಸ್ಥಳೀಯರು ಇನ್ನಷ್ಟು ಭಯಗೊಂಡಿದ್ದಾರೆ‌.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT