ರಾಜ್ಯ

ರಾಜ್ಯದಲ್ಲಿ ಇನ್ನೆರಡು ದಿನ ಲಾಕ್ ಡೌನ್ ಮುಂದುವರಿಕೆ: ಕರ್ನಾಟಕ ಸರ್ಕಾರದಿಂದ ಆದೇಶ

Nagaraja AB

ಬೆಂಗಳೂರು: ಕೋವಿಡ್-೧೯ ಸೋಂಕು ನಿಯಂತ್ರಣ ಉದ್ದೇಶದಿಂದ ದೇಶಾದ್ಯಂತ ಈ ತಿಂಗಳ ೩೧ರವರೆಗೆ ಲಾಕ್ ಡೌನ್ ವಿಸ್ತರಿಸಿರುವ ಬೆನ್ನಲ್ಲೇ  ರಾಜ್ಯದಲ್ಲಿ ೨ ದಿನಗಳ ಕಾಲ ಲಾಕ್ ಡೌನ್ ವಿಸ್ತರಿಸಲಾಗಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ಆದೇಶ ಜಾರಿ ಮಾಡಿದ್ದು, ಈಗಿರುವ ಮಾರ್ಗಸೂಚಿ ನಿಯಮಗಳು ಮುಂದುವರೆಯಲಿವೆ ಎಂದು ತಿಳಿಸಿದೆ.

ಕೋವಿಡ್-೧೯ ಸೋಂಕು ನಿಯಂತ್ರಣ ಜೊತೆಗೆ ಸಂಬಂಧಪಟ್ಟ ರಾಜ್ಯ ಸರ್ಕಾರಗಳು ಆರ್ಥಿಕ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಅಗತ್ಯಕ್ಕೆ ತಕ್ಕಂತೆ ಮಾರ್ಗಸೂಚಿಗಳಲ್ಲಿ ಬದಲಾವಣೆ ಮಾಡಿಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ.

ಈ ನಡುವೆ ರಾಜ್ಯದಲ್ಲಿ ಕೋವಿಡ್-೧೯ ಸೋಂಕಿನ ಪ್ರಕರಣಗಳು ಹೆಚ್ಚಾಗುವ ಸಂಭವವಿದ್ದು, ಸೋಂಕು ನಿಯಂತ್ರಣಕ್ಕೆ ವ್ಯಾಪಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸೋಂಕು ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು, ಜಿಲ್ಲೆಗಳ ಸ್ಥಿತಿಗತಿ ಕುರಿತಂತೆ ಪ್ರತಿ ಸೋಮವಾರ ಹಾಗೂ ಗುರುವಾರಗಳಂದು ಸರ್ಕಾರಕ್ಕೆ ವರದಿ ಸಲ್ಲಿಸುವಂತೆಯೂ ಅವರು ಆದೇಶಿಸಿದ್ದಾರೆ. 

ಕೋವಿಡ್-19 ನಿಯಂತ್ರಣಕ್ಕೆ ಪ್ರಸ್ತುತ ಜಾರಿಯಲ್ಲಿರುವ ಲಾಕ್ ಡೌನ್ ಮೂರನೇ ಹಂತದಲ್ಲಿನ ಮಾರ್ಗಸೂಚಿಗಳಲ್ಲಿನ ಕ್ರಮಗಳನ್ನು ಕಡ್ಡಾಯವಾಗಿ ಮುಂದಿನ ಆದೇಶದವರೆಗೆ ಅಥವಾ ಮೇ 19ರ ಮಧ್ಯರಾತ್ರಿ 12 ಗಂಟೆಯವರೆಗೂ ಪಾಲಿಸುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಅಧ್ಯಕ್ಷರು ಆಗಿರುವ  ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್  ತಿಳಿಸಿದ್ದಾರೆ.

ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆಯಿಂದಾಗಿ ಕೆಎಸ್ ಆರ್ ಟಿ, ಬಿಎಂಟಿಸಿ ಬಸ್ ಗಳು ಪುನರ್ ಆರಂಭವಾಗುತ್ತಿಲ್ಲ. ಆಟೋ, ಟ್ಯಾಕ್ಸಿ ರಸ್ತೆಗೆ ಇಳಿಯುತ್ತಿಲ್ಲ. ಬಾರ್ ಅಂಡ್ ರೆಸ್ಟೋರೆಂಟ್, ಹೋಟೆಲ್, ಪಬ್ ಬಾಗಿಲು ತೆರೆಯುತ್ತಿಲ್ಲ. ಎಂದಿನಂತೆ ವ್ಯಾಪಾರ ವಹಿವಾಟು ನಡೆದು ಸಹಜ ಪರಿಸ್ಥಿತಿ ಮರುಕಳಿಸಲು ಇನ್ನೊಂದಿಷ್ಟು ದಿನಗಳ ಕಾಲ ಕಾಯಬೇಕಾಗಿದೆ.

SCROLL FOR NEXT