ಲಕ್ಷ್ಮಣ್ ಸವದಿ 
ರಾಜ್ಯ

ನೂತನ ಲಾಕ್'ಡೌನ್ ಮಾರ್ಗದರ್ಶನದಲ್ಲಿ ಸಾರಿಗೆ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಿ: ಕೇಂದ್ರಕ್ಕೆ ಸಚಿವ ಲಕ್ಷ್ಮಣ್ ಸವದಿ ಮನವಿ

ನೂತನ ಲಾಕ್'ಡೌನ್ ಮಾರ್ಗದರ್ಶನದಲ್ಲಿ ಸಾರಿಗೆ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸಾರಿಗೆ ಸಚಿವ ಹಾಗೂ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿಯವರು ಭಾನುವಾರ ಮನವಿ ಮಾಡಿಕೊಂಡಿದ್ದಾರೆ. 

ಬೆಂಗಳೂರು: ನೂತನ ಲಾಕ್'ಡೌನ್ ಮಾರ್ಗದರ್ಶನದಲ್ಲಿ ಸಾರಿಗೆ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸಾರಿಗೆ ಸಚಿವ ಹಾಗೂ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿಯವರು ಭಾನುವಾರ ಮನವಿ ಮಾಡಿಕೊಂಡಿದ್ದಾರೆ. 

ಈ ಕುರಿತು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರಿಗೆ ಪತ್ರ ಬರೆದಿರುವ ಅವರು, ಲಾಕ್'ಡೌನ್ ಜಾರಿಗೊಂಡಾಗಿನಿಂದಲೂ ರಾಜ್ಯ ಸಾರಿಗೆ ಇಲಾಖೆಯ ನಾಲ್ಕು ವಿಭಾಗಗಳಿಗೆ ಒಟ್ಟು ರೂ.1,600ಕೋಟಿಯಷ್ಟು ನಷ್ಟ ಎದುರಾಗಿದೆ. ಈ ನಿಟ್ಟಿನಲ್ಲಿ ಲಾಕ್'ಡೌನ್ ಕಾರಣದಿಂದಾಗಿ ರದ್ದಾಗಿರುವ ಸಾರಿಗೆ ಬಸ್ ಸಂಚಾರವನ್ನು ಪುನರಾರಂಭಿಸಲು ಕೇಂದ್ರ ಸರ್ಕಾರ ಅವಕಾಶ ನೀಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ. 

ಹವಾನಿಯಂತ್ರಿತವಲ್ಲದ ಬಸ್ ಗಳನ್ನು ರಸ್ತೆಗಿಳಿಯಲು ಕೇಂದ್ರ ಸರ್ಕಾರ ಅವಕಾಶ ನೀಡಬೇಕು. ಬಸ್ ಗಳಲ್ಲಿ ಕುಳಿತುಕೊಳ್ಳುವ ಸಾಮರ್ಥ್ಯದಷ್ಟು ಜನರಿಗೆ ಪ್ರಯಾಣಿಸುವವರಿಗೆ ಅವಕಾಶ ನೀಡಬೇಕು. ಇಲ್ಲದಿದ್ದರೆ ಬೇಡಿಕೆಯನ್ನು ಪೂರೈಸಲು ಮತ್ತಷ್ಟು ಬಸ್ ಗಳನ್ನು ರಸ್ತೆಗಿಳಿಸಬೇಕಾಗಬಹುದು. ಆದರೆ, ಅದು ಸದ್ಯಕ್ಕೆ ಸಾಧ್ಯವಿಲ್ಲ. ನೂತನ ಲಾಕ್'ಡೌನ್ ಮಾರ್ಗದರ್ಶನದಲ್ಲಿ ಸಾರಿಗೆ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕೆಂದು ಪತ್ರದಲ್ಲಿ ತಿಳಿಸಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್