ಆತ್ಮಹತ್ಯೆ 
ರಾಜ್ಯ

ಕೊಳ್ಳೇಗಾಲದಲ್ಲಿ ಪೇದೆಯ ಪತ್ನಿ ನೇಣಿಗೆ ಶರಣು: ಕಾರಣ ನಿಗೂಢ 

ಪೊಲೀಸ್ ಪೇದೆಯ ಪತ್ನಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಕೊಳ್ಳೆಗಾಲದಲ್ಲಿ ಶನಿವಾರ ನಡೆದಿದೆ.

ಕೊಳ್ಳೇಗಾಲ: ಪೊಲೀಸ್ ಪೇದೆಯ ಪತ್ನಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಕೊಳ್ಳೆಗಾಲದಲ್ಲಿ ಶನಿವಾರ ನಡೆದಿದೆ.

ಕೊಳ್ಳೇಗಾಲದ ಪಟ್ಟಣ ಪೊಲೀಸ್ ಠಾಣೆಯ ಪೇದೆ ಪರುಶುರಾಮ್ ಎಂಬುವವರ ಪತ್ನಿ ನಾಗರತ್ನ (19 ವರ್ಷ) ವಸತಿ ಗೃಹದಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಪರಶುರಾಮ್ ಮೂಲತಃ ರಾಯಚೂರಿನವರಾಗಿದ್ದು, ಕಳೆದ 3-4 ವರ್ಷಗಳಿಂದ ಪೊಲೀಸ್ ಪೇದೆಯಾಗಿ ಕೆಲಸ  ನಿರ್ವಹಿಸುತ್ತಿದ್ದಾರೆ. ಅದೇ ಜಿಲ್ಲೆಯ ತನ್ನ ಸಂಬಂಧಿಕರಾದ ನಾಗರತ್ನ ಅವರನ್ನು ಒಂದು ವರ್ಷದ‌ ಹಿಂದೆ ಮದುವೆಯಾಗಿ ಇಲ್ಲಿನ ಪೊಲೀಸ್ ವಸತಿ ಗೃಹದಲ್ಲಿ ವಾಸವಾಗಿದ್ದರು.

ಎಂದಿನಂತೆ ಕರ್ತವಕ್ಕೆ ತೆರಳಿ ಮಧ್ಯಾಹ್ನ ಊಟದ ಸಮಯದಲ್ಲಿ ಮನೆಗೆ ಹಿಂತಿರುಗಿದಾಗ ಮನೆಯ ಬಾಗಿಲು ತೆರೆಯದಿರುವುದನ್ನು ಕಂಡು ಪೇದೆ ಪರಶುರಾಮ್​ ಗಾಬರಿಯಾಗಿದ್ದಾರೆ. ಬಳಿಕ ಬಾಗಿಲು ಒಡೆದು ನೋಡಿದಾಗ ನಾಗರತ್ನ ನೇಣಿಗೆ ಶರಣಾಗಿದ್ದಾಳೆ. ಶವವನ್ನು ಸರ್ಕಾರಿ ಆಸ್ಪತ್ರೆಗೆ  ರವಾನಿಸಲಾಗಿದ್ದು ಮೃತರ ಸಂಬಂಧಿಕರು ಬಂದು ದೂರು ನೀಡಿದ ಮೇಲೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದೆಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ