ಸಾಂದರ್ಭಿಕ ಚಿತ್ರ 
ರಾಜ್ಯ

ಅಕ್ರಮ ಗ್ಯಾಸ್ ರೀಫಿಲಿಂಗ್ ಕೇಂದ್ರದ ಮೇಲೆ ಸಿಸಿಬಿ ಕ್ಷಿಪ್ರ ದಾಳಿ: 6 ಮಂದಿ ಬಂಧನ; 384 ಸಿಲಿಂಡರ್ ವಶ

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ಕೇಂದ್ರಗಳ ಮೇಲೆ ದಾಳಿ ನಡೆಸಿದ ಸಿಸಿಬಿ ಅಧಿಕಾರಿಗಳು, ಆರು ಮಂದಿ ಆರೋಪಿಗಳನ್ನು ಬಂಧಿಸಿ 3.73 ಲಕ್ಷ ರೂ. ಮೌಲ್ಯದ 384 ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ಕೇಂದ್ರಗಳ ಮೇಲೆ ದಾಳಿ ನಡೆಸಿದ ಸಿಸಿಬಿ ಅಧಿಕಾರಿಗಳು, ಆರು ಮಂದಿ ಆರೋಪಿಗಳನ್ನು ಬಂಧಿಸಿ 3.73 ಲಕ್ಷ ರೂ. ಮೌಲ್ಯದ 384 ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಸಿದ್ಧಾರ್ಥ ಲೇಔಟ್‌ನ ನಿವಾಸಿ ರಾಜು (32), ನಾಗರಭಾವಿ ಮಾರುತಿ ನಗರ 1ನೇ ಮೈನ್ ನಿವಾಸಿ ಅಮರ್ ಸಿ.ಎ (32), ಹೆಗ್ಗನಹಳ್ಳಿ ಮುಖ್ಯ ರಸ್ತೆಯ ವಿಶ್ವನೀಡಂ ಅಂಚೆ, ಮೋಹನ್ ಥಿಯೇಟರ್ ಹತ್ತಿರ ನಿವಾಸಿ ಲಕ್ಷ್ಮಯ್ಯ ಎಚ್ , ನಾಗರಬಾವಿ ಅನ್ನಪೂರ್ಣೇಶ್ವರಿ ನಗರ ಚೆಲುವ ನಾರಾಯಣ ಸ್ವಾಮಿ ಪ್ರಸನ್ನ 1ನೇ ಕ್ರಾಸ್ ನಿವಾಸಿ ವಿನಯ್, ಆರ್.ಆರ್.ನಗರ ಹಲಗೆವಡೆರಹಳ್ಳಿ 4ನೆ ಕ್ರಾಸ್ ಸೂರ್ಯ ನಾರಾಯಣ ಸ್ಟೋರ್ಸ್ ನಿವಾಸಿ ಪ್ರಕಾಸ್, (34), ರಾಜಗೋಪಾಲನಗರ ನಿವಾಸಿ ತಿಮ್ಮಪ್ಪ (42) ಬಂಧಿತ ಆರೋಪಿಗಳ

ಬೇರೆ ಬೇರೆ ಪೊಲೀಸ್ ಠಾಣೆಗಳ ವ್ಯಾಪ್ತಿಗಳಲ್ಲಿ ಯಾವುದೇ ಸುರಕ್ಷತೆ ಕ್ರಮಗಳನ್ನು ಅನುಸರಿಸದೆ ಗ್ಯಾಸ್ ಸಿಲಿಂಡರ್‌ಗಳನ್ನು ಅಕ್ರಮವಾಗಿ ರೀಫಿಲ್ಲಿಂಗ್‌ ಮಾಡಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಅಧಿಕಾರಿಗಳು, ಪೀಣ್ಯ, ಕೆಂಗೇರಿ, ಕಾಮಾಕ್ಷಿಪಾಳ್ಯ, ವಿಜಯನಗರ, ಆರ್‌.ಆರ್.ನಗರ ಹಾಗೂ ರಾಜಗೋಪಾಲ ನಗರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!