ರಾಜ್ಯ

ಈಜುಕೊಳ, ಜಿಮ್ ಹೊರತುಪಡಿಸಿ, ಪ್ರೇಕ್ಷಕರಿಲ್ಲದೇ ಕ್ರೀಡಾ ಚಟುವಟಿಕೆ ಆಯೋಜನೆಗೆ ಷರತ್ತು ಬದ್ಧ ಅವಕಾಶ: ಸಚಿವ ಸಿಟಿ ರವಿ

Srinivasamurthy VN

ಬೆಂಗಳೂರು: ಕೊರೋನಾ ವೈರಸ್ ಲಾಕ್ ಡೌನ್‌ನಿಂದಾಗಿ ಸಂಪೂರ್ಣ ಸ್ಥಗಿತಗೊಂಡಿರುವ ಕ್ರೀಡಾ ಚಟುವಟಿಕೆಗಳನ್ನು ಪುನಾರಂಭಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ.

ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಟಿ ರವಿ ಅವರು, ಲಾಕ್ ಡೌನ್ ಹಿನ್ನೆಲೆಯಲ್ಲಿ ಕ್ರೀಡಾ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿತ್ತು. ಆದರೆ ಈಗ ಕೆಲವು ಕ್ರೀಡೆಗಳಿಗೆ ವಿನಾಯಿತಿ ನೀಡಲು ನಿರ್ಧರಿಸಲಾಗಿದ್ದು, ಈಜುಕೊಳ, ಜಿಮ್ ಹೊರತುಪಡಿಸಿ ಕ್ರೀಡಾ ಚಟುವಟಿಕೆಗಳಿಗೆ  ಅವಕಾಶ ನೀಡಲಾಗುವುದು. ಅಂತರ ಕಾಯ್ದುಕೊಳ್ಳಬಹುದಾದ ಕ್ರೀಡೆಗಳಿಗೆ ಅವಕಾಶ ದೊರೆಯಲಿದೆ ಎಂದು ತಿಳಿಸಿದರು.

ಕಬಡ್ಡಿ ಕ್ರೀಡೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ಕಬಡ್ಡಿಗೆ ಅವಕಾಶ ನೀಡಿಲ್ಲ. ಕೆಲವು ಷರತ್ತುಗಳನ್ನು ವಿಧಿಸಿ ಕ್ರೀಡಾ ಚಟುವಟಿಕೆಗಳಿಗೆ ಅವಕಾಶ ನೀಡಲಾಗುವುದು. ಮಾಸ್ಕ್ ಕಡ್ಡಾಯ, ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್, ಟಿಶ್ಯೂ ಪೇಪರ್  ಕಡ್ಡಾಯಗೊಳಿಸಲಾಗಿದೆ. ಪ್ರೇಕ್ಷಕರಿಗೆ ಅವಕಾಶ ಇಲ್ಲದೇ ಕ್ರೀಡೆಗಳು ನಡೆಯಬಹುದು. ಕ್ಲಬ್ ಗಳಲ್ಲಿ ಅಂತರ ಕಾಯ್ದುಕೊಂಡು ಸ್ಫೋರ್ಟ್ಸ್‌ ನಡೆಸಬಹುದು.

ಜೂನ್ ಒಂದರವರೆಗೆ ಜಿಮ್, ಸ್ವಿಮ್ಮಿಂಗ್, ಕಬಡ್ಡಿ, ಕುಸ್ತಿಗೆ ಅವಕಾಶ ಇಲ್ಲ. ಉಳಿದೆಲ್ಲಾ ಕ್ರೀಡೆಗಳಿಗೆ ಅವಕಾಶ ನೀಡಲು ಸರ್ಕಾರ  ಸಮ್ಮತಿ ನೀಡಿದೆ. ಫಿಟ್ನೆಸ್ ಸೆಂಟರ್ ಗಳಲ್ಲಿ ವೃತ್ತಿಪರರಿಗೆ ಅವಕಾಶ ಕೊಡಬೇಕು ಎನ್ನುವ ಮನವಿ ಬಂದಿದೆ. ಆದರೆ ಜೂನ್ ಒಂದರವರೆಗೆ ಅವಕಾಶ ನೀಡುವುದು ಬೇಡ ಎಂಬ ತೀರ್ಮಾನಕ್ಕೆ ಬರಲಾಗಿದೆ. ಅಂತೆಯೇ ಐಪಿಎಲ್ ನಲ್ಲಿ ಆಟಗಾರರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು  ಎಂದು ಅವರು ಹೇಳಿದರು.
 

SCROLL FOR NEXT