ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಉಡುಪಿಯಲ್ಲಿ 25, ಒಂದೇ ದಿನ ರಾಜ್ಯದಲ್ಲಿ 116 ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 1578ಕ್ಕೆ ಏರಿಕೆ!

ರಾಜ್ಯದಲ್ಲಿ ಕಳೆದ 12 ಗಂಟೆಗಳಲ್ಲಿ ಒಟ್ಟು 116 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿವೆ. ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1578ಕ್ಕೆ ಏರಿಕೆಯಾಗಿದೆ.

ಸಂಗ್ರಹ ಚಿತ್ರ
Vishwanath S
Updated On : 21 May 2020, 2:04 pm

ಬೆಂಗಳೂರು: ರಾಜ್ಯದಲ್ಲಿ ಕಳೆದ 12 ಗಂಟೆಗಳಲ್ಲಿ ಒಟ್ಟು 116 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿವೆ. ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1578ಕ್ಕೆ ಏರಿಕೆಯಾಗಿದೆ. 

ಇಲ್ಲಿಯವರೆಗೆ ಒಟ್ಟು 570 ಜನರು ಗುಣಮುಖರಾಗಿದ್ದು, ಒಟ್ಟು 42 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.

ಗುರುವಾರ ಬೆಂಗಳೂರು ನಗರದಲ್ಲಿ 7, ಹಾಸನದಲ್ಲಿ 19, ಮಂಡ್ಯದಲ್ಲಿ 14, ದಕ್ಷಿಣ ಕನ್ನಡದಲ್ಲಿ 5, ಚಿಕ್ಕಬಳ್ಳಾಪುರದಲ್ಲಿ 2, ದಾವಣಗೆರೆಯಲ್ಲಿ 3, ಬೆಳಗಾವಿಯಲ್ಲಿ 6, ವಿಜಯಪುರದಲ್ಲಿ 1, ಬೆಳಗಾವಿಯಲ್ಲಿ 2, ಶಿವಮೊಗ್ಗದಲ್ಲಿ 6, ಧಾರವಾಡದಲ್ಲಿ 5, ಮೈಸೂರಿನಲ್ಲಿ 1, ಉತ್ತರ ಕನ್ನಡದಲ್ಲಿ 9, ಉಡುಪಿಯಲ್ಲಿ 27, ಬಳ್ಳಾರಿಯಲ್ಲಿ 7, ತುಮಕೂರಿನಲ್ಲಿ 1, ಗದಗ 2 ಪ್ರಕರಣಗಳು ವರದಿಯಾಗಿವೆ. 

Advertisement

Advertisement

ಇವರಲ್ಲಿ ಬಹುತೇಕರು ಮುಂಬೈಗೆ ಪ್ರಯಾಣ ಬೆಳೆಸಿ ಹಿನ್ನೆಲೆ ಹೊಂದಿದ್ದಾರೆ. ದಕ್ಷಿಣ ಕನ್ನಡಕ್ಕೆ ದುಬೈಯಿಂದ ಆಗಮಿಸಿದವರಿಗೆ ಸೋಂಕು ತಗಲಿದೆ. ಉಳಿದಂತೆ ರಾಯಘಡ, ತಮಿಳುನಾಡು, ತೆಲಂಗಾಣ, ರಾಯಘಡ, ಥಾಣೆ, ಜಾರ್ಖಂಡ್, ಅಜ್ಮೀರ್ ನಿಂದ ಆಗಮಿಸಿದ್ದವರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement