ಶತಾಯುಷಿ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು
ಖ್ಯಾತ ಪರಿಸರ ಹೋರಾಟಗಾರ್ತಿ, ಶತಾಯುಷಿ ಸಾಲುಮರದ ತಿಮ್ಮಕ್ಕನವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹಾಸನ: ಖ್ಯಾತ ಪರಿಸರ ಹೋರಾಟಗಾರ್ತಿ, ಶತಾಯುಷಿ ಸಾಲುಮರದ ತಿಮ್ಮಕ್ಕನವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ತೀವ್ರ ಹೊಟ್ಟೆ ನೋವು, ವಾಂತಿ, ಭೇದಿ ಕಾಣಿಸಿ ಅಸ್ವಸ್ಥರಾಗಿದ್ದ ತಿಮ್ಮಕ್ಕನವರನ್ನು ಹಾಸನ ನಗರದ ಮಣಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ದತ್ತು ಪುತ್ರ ಬಳ್ಳೂರು ಉಮೇಶ್ ಅವರ ಸ್ವಗ್ರಾಮ ಬೇಲೂರಿನ ತಾಲ್ಲೂಕಿನ ಬಳ್ಳೂರು ಗ್ರಾನದಲ್ಲಿ ಕಳೆದೆರಡು ತಿಂಗಳಿನಿಂದ ತಿಮ್ಮಕ್ಕ ನೆಲೆಸಿದ್ದಾರೆ.
"ಹೊಟ್ಟೆ ನೋವು, ವಾಂತಿ, ಭೇದಿಯ ಕಾರಣ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈಗ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ.ಸಧ್ಯವೇ ಆರೋಗ್ಯ ಸುಧಾರಣೆ ಗಮನಿಸಿ ಆಸ್ಪತ್ರೆಯಿಂಡ ಡಿಸ್ಚಾರ್ಜ್ ಮಾಡುವುದಾಗಿ ವೈದ್ಯರು ತಿಳಿಸಿದ್ದಾರೆ" ಬಳ್ಕೂರು ಉಮೇಶ್ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.