ಪೊಲೀಸರು 
ರಾಜ್ಯ

ಕೊರೋನಾ ಭೀತಿ: 55 ವರ್ಷ ಮೇಲ್ಪಟ್ಟ ಪೊಲೀಸರಿಗೆ ಠಾಣೆಯಲ್ಲೇ ಕೆಲಸ - ಬಸವರಾಜ್ ಬೊಮ್ಮಾಯಿ

55 ವರ್ಷ ಮೇಲ್ಪಟ್ಟ ಸಿಬ್ಬಂದಿ ಪೊಲೀಸ್ ಠಾಣೆಯಲ್ಲೇ ಕಾರ್ಯ ನಿರ್ವಹಿಸಬೇಕು ಎಂದು ಗೃಹಸಚಿವ ಬಸವರಾಜ್ ಬೊಮ್ಮಾಯಿ‌ ಸೂಚಿಸಿದ್ದಾರೆ.

ಮೈಸೂರು: 55 ವರ್ಷ ಮೇಲ್ಪಟ್ಟ ಸಿಬ್ಬಂದಿ ಪೊಲೀಸ್ ಠಾಣೆಯಲ್ಲೇ ಕಾರ್ಯ ನಿರ್ವಹಿಸಬೇಕು ಎಂದು ಗೃಹಸಚಿವ ಬಸವರಾಜ್ ಬೊಮ್ಮಾಯಿ‌ ಸೂಚಿಸಿದ್ದಾರೆ.

ಕೊರೊಬಾ ಭೀತಿ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಗೆ ಅಗತ್ಯ ಸುರಕ್ಷತಾ ಕ್ರಮವಹಿಸಿದ್ದರೂ ಸಿಬ್ಬಂದಿಗೆ ಸೋಂಕು ತಗುಲುತ್ತಿದೆ. ಹೀಗಾಗಿ ಹೊಸ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು. ವಯಸ್ಸಾದವರಿಗೆ ಬಹುಬೇಗನೆ ಸೋಂಕು ತಗುಲುವ ಸಾಧ್ಯತೆ ಇರುವುದರಿಂದ ವೈಜ್ಞಾನಿಕವಾಗಿ ಪಾಳಿಯಲ್ಲಿ ಬದಲಾವಣೆ ಮಾಡಲು ಸೂಚಿಸಲಾಗಿದೆ ಎಂದರು.

ಬಹಳಷ್ಟು ಜನ ಹೊರ ರಾಜ್ಯದಿಂದ ಬರುತ್ತಿದ್ದಾರೆ. ಹೀಗಾಗಿ‌ ಕ್ವಾರಂಟೈನ್ ವಿಚಾರದಲ್ಲಿ ಕಠಿಣ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು. ಇನ್ನು, ತಮಿಳುನಾಡು ರಾಜ್ಯದ ಗಡಿಯಲ್ಲಿ ಅಕ್ರಮ ಪ್ರವೇಶ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಮದ್ಯ ಮಾರಾಟದ ಸಂದರ್ಭದಲ್ಲಿ ಆ ಸಂಖ್ಯೆ ಹೆಚ್ಚಾಗಿದ್ದು, ಸದ್ಯ ಗಡಿಯಲ್ಲಿ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಕೆಲ ಗಡಿಗಳಿಗೆ ಸ್ವತಃ ತಾವೇ ತೆರಳಿ ಭದ್ರತೆ ಪರಿಶೀಲನೆ ಮಾಡಿರುವುದಾಗಿ ತಿಳಿಸಿದ ಸಚಿವರು, ಹೊರಗಿನಿಂದ ರಾಜ್ಯ ಪ್ರವೇಶಿಸಿದವರಿಗೆ ಕ್ವಾರಂಟೈನ್ ಕಡ್ಡಾಯ ಎಂದರು. ಪೇದೆಗೆ ಸೋಂಕು ಹಿನ್ನೆಲೆಯಲ್ಲಿ ಅಗತ್ಯವಿದ್ದರೇ ಫ್ರೇಜರ್ ಟೌನ್ ಪೊಲೀಸ್ ಠಾಣೆ ಲಾಕ್ ಡೌನ್ ಮಾಡಲಾಗುವುದು. ಪೇದೆಯ ಟ್ರಾವೆಲ್ ಹಿಸ್ಟರಿ ಕಲೆ ಹಾಕಿದ ಬಳಿಕ ಈ ಕುರಿತು ನಿರ್ಧರಿಸಲಾಗುವುದು ಎಂದರು‌.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ, 1 ವರ್ಷ ಶಾಂತಿ ಕಾಪಾಡುವ ಷರತ್ತು..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!