ರಾಜ್ಯ

ಬೆಂಗಳೂರಿನಲ್ಲಿ ಕೊರೋನಾ ವಾರಿಯರ್ ಪೊಲೀಸ್ ಪೇದೆಗೂ ಸೋಂಕು

Lingaraj Badiger

ಬೆಂಗಳೂರು: ಕೊರೋನಾ ವಾರಿಯರ್ಸ್ ಗೂ ಮಹಾಮಾರಿ ಬೆನ್ನಟ್ಟಿದ್ದು, ಇದೀಗ ನಗರ ಸಂಚಾರ ಠಾಣೆಯ ಪೊಲೀಸ್ ಕಾನ್ ಸ್ಟೆಬಲ್ ಓರ್ವರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ.

ರಾಮಕೃಷ್ಣ ಹೆಗಡೆ ನಗರದ ನಿವಾಸಿಯಾಗಿರುವ ಕಾನ್‌ಸ್ಟೆಬಲ್, ಸಂಚಾರ ಪೊಲೀಸ್ ಠಾಣೆಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಲ್ಲದೇ, ಕೆಲ ಬಾರಿ ಫ್ರೇಜರ್ ಟೌನ್‌ ಭಾಗದಲ್ಲಿಯೂ ಕರ್ತವ್ಯ ನಿರ್ವಹಿಸಿದ್ದರು ಎಂದು ತಿಳಿದು ಬಂದಿದೆ.

ಕೊರೋನಾ ಕರ್ತವ್ಯದಲ್ಲಿದ್ದ ಕಾನ್ ಸ್ಟೇಬಲ್ ಮುಂಜಾಗ್ರತಾ ಕ್ರಮವಾಗಿ ಕಳೆದ ಏಪ್ರಿಲ್ ತಿಂಗಳಿನಲ್ಲೇ ಅವರ ಕುಟುಂಬದವರನ್ನು ತಮ್ಮೂರಿಗೆ ಕಳುಹಿಸಿ, ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು.

ಈಗ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಪೇದೆ ಜತೆ ಮಾರ್ಗಮಧ್ಯೆ ಹೆನ್ನೂರಿನ ಪಿಜಿ(ಪೇಯಿಂಗ್​ ಗೆಸ್ಟ್)ಗೆ ಡ್ರಾಪ್ ತೆಗೆದುಕೊಳ್ಳುತ್ತಿದ್ದ ಮಹಿಳಾ ಪೇದೆಯೊಬ್ಬರನ್ನು ಬಿಬಿಎಂಪಿಯ ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸಲಾಗಿದೆ.

ಕರ್ತವ್ಯ ನಿರ್ವಹಿಸುತ್ತಿದ್ದ ಠಾಣೆಯನ್ನು ಸ್ಯಾನಿಟೈಜ್ ಮಾಡಲಾಗಿದ್ದು, ಇವರ ಸಂಪರ್ಕಕ್ಕೆ ಬಂದವರನ್ನೂ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

ಗುರುವಾರ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆಯಲ್ಲೂ ಪೇದೆಯೊಬ್ಬರಿಗೆ ಕರೊನಾ ಸೋಂಕು ದೃಢಪಟ್ಟಿತ್ತು.

SCROLL FOR NEXT