ಸಾಂದರ್ಭಿಕ ಚಿತ್ರ 
ರಾಜ್ಯ

ವೇಶ್ಯಾವಾಟಿಕೆಗೆ ಬಲಿಯಾಗುತ್ತಿದ್ದ ನಾಲ್ವರು ಯುವತಿರ ರಕ್ಷಣೆ: ಇಬ್ಬರ ಬಂಧನ

ಹೊರರಾಜ್ಯದ ಯುವತಿಯರನ್ನು ಉದ್ಯೋಗ ಕೊಡಿಸುವ ನೆಪದಲ್ಲಿ ತಂದು ವೇಶ್ಯವಾಟಿಕೆ ದಂಧೆಗೆ ದೂಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ, ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ.

ಬೆಂಗಳೂರು: ಹೊರರಾಜ್ಯದ ಯುವತಿಯರನ್ನು ಉದ್ಯೋಗ ಕೊಡಿಸುವ ನೆಪದಲ್ಲಿ ತಂದು ವೇಶ್ಯವಾಟಿಕೆ ದಂಧೆಗೆ ದೂಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ, ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ.

ಶಿವಕುಮಾರ್ (31), ರಂಗಸ್ವಾಮಿ (51) ಬಂಧಿತ ಆರೋಪಿಗಳು. ಮಾರತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಹೋಮ್ ಟೌನ್ ಪಕ್ಕದ ಬಾಡಿಗೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಗುರುವಾರ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು‌.

ದಾಳಿ ಸಂದರ್ಭದಲ್ಲಿ ವೇಶ್ಯಾವಾಟಿಕೆ ಗೃಹಕ್ಕೆ ಗಿರಾಕಿ ಬಂದಿದ್ದ ನಾಜಿಮ್ ವುದ್ದೀನ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೊರರಾಜ್ಯದ ಯುವತಿಯರನ್ನು ಉದ್ಯೋಗ ಕೊಡಿಸುವ ನೆಪದಲ್ಲಿ ಕರೆ ತಂದು ವೇಶ್ಯವಾಟಿಕೆ ದಂಧೆಗೆ ದೂಡಿ, ಅಕ್ರಮವಾಗಿ‌ ಆರೋಪಿಗಳು ಹಣ ಸಂಪಾದನೆ ಮಾಡುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರಿಂದ 3 ಮೊಬೈಲ್ ಫೋನ್, 2,910 ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಸಿಸಿಬಿ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ. ಪ್ರಕರಣದ ಮುಖ್ಯ ಆರೋಪಿ ಸ್ವಾತಿ (36) ತಲೆಮರೆಸಿಕೊಂಡಿದ್ದು, ಆಕೆಯ ಪತ್ತೆಗಾಗಿ ಬಲೆ ಬೀಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಾರತ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?