ಸಂಗ್ರಹ ಚಿತ್ರ 
ರಾಜ್ಯ

ಚಿಕ್ಕಮಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ

ಒಂದೇ ಕುಟುಂಬದ ಮೂವರು ಕೀಟನಾಶಕವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಪ್ಪ ತಾಲೂಕಿನ ಸಿಗದಾಳು ಘಾಟಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಚಿಕ್ಕಮಗಳೂರು: ಒಂದೇ ಕುಟುಂಬದ ಮೂವರು ಕೀಟನಾಶಕವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಪ್ಪ ತಾಲೂಕಿನ ಸಿಗದಾಳು ಘಾಟಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಕೊಪ್ಪ ತಾಲೂಕಿನ ಉತ್ತಮೇಶ್ವರದ ತಂದೆ ಬಾಬಣ್ಣ(55 ), ಅವರ ಪುತ್ರಿ ಶೈಲಾ(32) ಹಾಗೂ ಮೊಮ್ಮಗಳು ಅನನ್ಯ(11) ಆತ್ಮಹತ್ಯೆಗೆ ಯತ್ನಿಸಿದವರು. 

ಸಿಗದಾಳು ಗ್ರಾಮದಿಂದ ಸುಮಾರು 10 ಕಿ.ಮೀ. ದೂರದ ಘಾಟಿಯಲ್ಲಿನ ಅರಣ್ಯ ಪ್ರದೇಶದಲ್ಲಿ ಕೀಟನಾಶಕ ಔಷಧಿಯನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸ್ಥಳೀಯರು ಕಾಡಿಗೆ ಹೋದಾಗ ನರಳಾಡುತ್ತಿರುವುದನ್ನು ಕಂಡು ಅವರು ಹರಿಹರಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಹರಿಹರಪುರ ಪೊಲೀಸರು ಸ್ಥಳೀಯರ ಸಹಾಯದಿಂದ ಮೂವರನ್ನೂ ಕೊಪ್ಪ ಸಾರ್ವಜನಿಕ ಆಸ್ವತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮೂವರನ್ನು ಮಣಿಪಾಲ್ ಆಸ್ವತ್ರೆಗೆ ರವಾನಿಸಲಾಗಿದೆ. ಆದರೆ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ಆತ್ಮಹತ್ಯೆಗೆ ಯತ್ನಿಸಿರುವ ಬಾಬಣ್ಣ ಕೊಪ್ಪದ ಹುಲ್ಲುಮಕ್ಕಿಯಲ್ಲಿ ವಾಸವಿದ್ದರು. ಆ ಮನೆಯನ್ನು ಮಾರಾಟ ಮಾಡಿ ಉತ್ತಮೇಶ್ವರ ಗ್ರಾಮದಲ್ಲಿ ಜಮೀನು ಖರೀದಿಸಿ ವಾಸವಿದ್ದರು ಎಂದು ತಿಳಿದುಬಂದಿದೆ. ಹರಿಹರಪುರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!