ಸಂಗ್ರಹ ಚಿತ್ರ 
ರಾಜ್ಯ

ಜೆಪಿ ನಗರ ಅಪಾರ್ಟ್'ಮೆಂಟ್ ನಿವಾಸಿಯೊಬ್ಬರಲ್ಲಿ ಪಾಸಿಟಿವ್ ಬಂದ ಕೊರೋನಾ: ಹೆಚ್ಚಿದ ಆತಂಕ

ಜೆಪಿ ನಗರದಲ್ಲಿರುವ ಹೆಸರಾಂತ ಅಪಾರ್ಟ್'ಮೆಂಟ್ ವೊಂದರ ನಿವಾಸಿಯೊಬ್ಬರಲ್ಲಿ ಕೊರೋನಾ ವೈರಸ್ ಪಾಸಿಟಿವ್ ಬಂದಿದ್ದು, ಈ ಬೆಳವಣಿಗೆ ಸ್ಥಳೀಯ ನಿವಾಸಿಗಳಲ್ಲಿನ ಆತಂಕವನ್ನು ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ. 

ಬೆಂಗಳೂರು: ಜೆಪಿ ನಗರದಲ್ಲಿರುವ ಹೆಸರಾಂತ ಅಪಾರ್ಟ್'ಮೆಂಟ್ ವೊಂದರ ನಿವಾಸಿಯೊಬ್ಬರಲ್ಲಿ ಕೊರೋನಾ ವೈರಸ್ ಪಾಸಿಟಿವ್ ಬಂದಿದ್ದು, ಈ ಬೆಳವಣಿಗೆ ಸ್ಥಳೀಯ ನಿವಾಸಿಗಳಲ್ಲಿನ ಆತಂಕವನ್ನು ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ. 

ಅಪಾರ್ಟ್ ನಲ್ಲಿ ಹಲವು ಹಿರಿಯ ನಾಗರೀಕರು, ಮಕ್ಕಳು ಹಾಗೂ ವೈರಸ್ ಪಾಸಿಟಿವ್ ಬಂದಿರುವ ವ್ಯಕ್ತಿಯಿರುವ ಬ್ಲಾಕ್ ನಲ್ಲಿ ಸಾಕಷ್ಟು ಜನರು ವಾಸವಿದ್ದಾರೆ. ನಮಗೆ ಬಹಳ ಆತಂಕವಾಗುತ್ತಿದೆ. ಸೋಂಕಿತ ವ್ಯಕ್ತಿ ಎಲ್ಲೆಲ್ಲಿ ಓಡಾಡಿದ್ದರು ಎಂಬುದು ನಮಗೆ ಗೊತ್ತಿಲ್ಲ ಎಂದು ನಿವಾಸಿಯೊಬ್ಬರು ಹೇಳಿದ್ದಾರೆ. 

ನಿಯಮದ ಪ್ರಕಾರ ಸೋಂಕಿತ ವ್ಯಕ್ತಿಯಿರುವ ಮೂರು ಮಹಡಿಗಳನ್ನು ಕಂಟೈನ್ಮೆಂಟ್ ಝೋನ್ ಎಂದು ಹೇಳಲಾಗುತ್ತಿದ್ದು, ಈ ಬ್ಲಾಕ್ ನಲ್ಲಿರುವ ಪ್ರದೇಶವನ್ನಷ್ಟೇ ಸೀಲ್ ಮಾಡಲು ಬಿಬಿಎಂಪಿ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. 

ಪ್ರಸ್ತುತ ಸೋಂಕಿತ ವ್ಯಕ್ತಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು. ಕುಟುಂಬ ಸದಸ್ಯರೆಲ್ಲರನ್ನೂ ಪರೀಕ್ಷೆಗೊಳಪಡಿಸಲಾಗುತ್ತಿದೆ. ಅಲ್ಲದೆ, ಮೂರು ಮಹಡಿಯಲ್ಲಿರುವ ಮನೆಗಳ ನಿವಾಸಿಗಳನ್ನು ಮನೆಗಳಲ್ಲಿಯೇ ಉಳಿಯಲು ಬಿಬಿಎಂಪಿ ಅಧಿಕಾರಿಗಳು ಸೂಚಿಸಿದ್ದಾರೆಂದು ತಿಳಿದುಬಂದಿದೆ. 

ಈ ನಡುವೆ ಸೋಂಕಿತ ವ್ಯಕ್ತಿಯಿದ್ದ ಪ್ರೇದಶ ಸೇರಿ 200 ಮೀಟರ್ ವರೆಗಿನ ಪ್ರದೇಶಗಳನ್ನು ಅಧಿಕಾರಿಗಳು ಸ್ಯಾನಿಟೈಸ್ ಮಾಡುತ್ತಿದ್ದು, ಕಂಟೈನ್ಮೆಂಟ್ ಝೋನ್ ನಲ್ಲಿರುವ ಜನರು ಹೊರಗೆ ಬರದಂತೆ ಸೂಚಿಸಲಾಗಿದೆ ಎಂದು ವರದಿಗಳು ತಿಳಿಸಿವೆ. 

ಕಂಟೈನ್ಮೆಂಟ್ ಝೋನ್ ನ ಲ್ಲಿರುವ ಜನರಿಗೆ 28 ದಿನಗಳ ಕಾಲ ಅಗತ್ಯ ವಸ್ತುಗಳನ್ನು ಅಧಿಕಾರಿಗಳೇ ಮನೆ ಬಾಗಿಲಿಗೆ ತಲುಪಿಸಲಿದ್ದಾರೆ. 28 ದಿನಗಳ ಬಹಳ ಸುದೀರ್ಘ ಕಾಲವಾಯಿತು. ಅಪಾರ್ಟ್'ಮೆಂಟ್ ನಿಂದ ಯಾರೂ ಹೊರಗೆ ಹೋಗದಂತೆ ಹಾಗೂ ಯಾರೂ ಒಳಗೆ ಬರದಂತೆ ನೋಡಿಕೊಳ್ಳಲಾಗುತ್ತಿದೆ. ಸ್ಥಳೀಯ ನಿವಾಸಿಗಳಾರೂ ಹೆದರಬಾರದು. ಅಪಾರ್ಟ್'ಮೆಂಟ್ ನಲ್ಲಿರುವ ಮೂರು ಮಹಡಿಗಳನ್ನಷ್ಟೇ ಕಂಟೈನ್ಮೆಂಟ್ ಝೋನ್ ಎಂದು ಪರಿಗಣಿಸಲಾಗಿದೆ. ಇತರರ ಜೀವ ಕೂಡ ಮುಖ್ಯವಾಗಿದ್ದು, ಎಲ್ಲಾ ರೀತಿಯ ಮಾರ್ಗಸೂಚಿಗಳನ್ನು ಅನುಸರಿಸಲಾಗುತ್ತಿದೆ. ಸ್ಥಳೀಯ ನಿವಾಸಿಗಳು ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT