ರಾಜ್ಯ

ಬೆಳಗಾವಿ: ಕಾರು ಹರಿದು ಮಹಿಳೆಯರಿಬ್ಬರ ಸಾವು

Raghavendra Adiga

ಬೆಳಗಾವಿ: ಕಾರು ಹರಿದು ಮಹಿಳೆಯರಿಬ್ಬರು ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಮಾರಿಹಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ಮುಥಗಾ ಗ್ರಾಮದ ಬಳಿ ನಡೆದಿದೆ.

ಅಪಘಾತ ಸಂಭವಿಸಿದಾಗ ಸಂತ್ರಸ್ತ ಮಹಿಳೆಯರು ನಿನ್ನೆ ರಾತ್ರಿ ಪಾದಚಾರಿ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಅವರ ಮೇಲೆ ಹರಿದಿದೆ ಎಂದು ಪೊಲೀಸರು ಹೇಳಿದ್ದಾರೆ.

ಮೃತರನ್ನು ಸವಿತಾ ಪಾಟೀಲ್ (43) ಮತ್ತು ವಿದ್ಯಾ ಪಾಟೀಲ್ (54) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡಿರುವ ಪಾದಚಾರಿ ಶಾಂತಾ ಚೌಗಲ್ ಮತ್ತು ಕಾರು ಚಾಲಕನನ್ನು ಆಸ್ಪತ್ರೆಗೆ ಸಾಗಿಸಿದ್ದು, ಮಾರಿಹಾಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

SCROLL FOR NEXT