ಸಚಿವ ಬೈರತಿ ಬಸವರಾಜ್ 
ರಾಜ್ಯ

ಅಕ್ರಮ - ಸಕ್ರಮ ರಾಜ್ಯಾದ್ಯಂತ ವಿಸ್ತರಣೆ: ಬೈರತಿ ಬಸವರಾಜ್ 

ಬೆಂಗಳೂರು ಮಾದರಿಯಂತೆ ರಾಜ್ಯದಲ್ಲೆಡೆ ಅಕ್ರಮ- ಸಕ್ರಮಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ನಗರಾಭಿವೃದ್ದಿ  ಸಚಿವ  ಬೈರತಿ ಬಸವರಾಜ್  ಹೇಳಿದ್ದಾರೆ.

ದಾವಣೆಗೆರೆ: ಬೆಂಗಳೂರು ಮಾದರಿಯಂತೆ ರಾಜ್ಯದಲ್ಲೆಡೆ ಅಕ್ರಮ- ಸಕ್ರಮಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ನಗರಾಭಿವೃದ್ದಿ  ಸಚಿವ  ಬೈರತಿ ಬಸವರಾಜ್  ಹೇಳಿದ್ದಾರೆ.

ದಾವಣೆಗೆರೆಯಲ್ಲಿ ಇಂದು ಸುದ್ದಿಗಾರರ  ಜೊತೆ ಮಾತನಾಡಿದ ಅವರು ರಾಜ್ಯದ ಇತರೆ ಮಹಾನಗರ ಪಾಲಿಕೆ, ನಗರ ಸಭೆ ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ಅಕ್ರಮ ಸಕ್ರಮಕ್ಕೆ ಅವಕಾಶ ಕಲ್ಪಿಸಲು ಅನುಕೂಲವಾಗುವಂತೆ  ಇಷ್ಟರಲ್ಲಿಯೇ ಸಂಪುಟ ಸಭೆಯಲ್ಲಿ ಸೂಕ್ತ ನಿರ್ಧಾರ  ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಈಗಾಗಲೇ ಬೆಂಗಳೂರಿನಲ್ಲಿ ಬಿಡಿಎನಲ್ಲಿ ಅಕ್ರಮ ಸಕ್ರಮಕ್ಕೆ ಅವಕಾಶ ಮಾಡಿಕೊಡಲಾಗಿದೆ ಇದನ್ನು ರಾಜ್ಯವ್ಯಾಪಿ  ಮಾಡುವ ಉದ್ದೇಶವಿದೆ. ಇದರಿಂದ ಸರ್ಕಾರಕ್ಕೆ ಆದಾಯ ಕೂಡಾ ಬರಲಿದೆ.ಜೊತೆಗೆ ಬಡಜನರಿಗೂ ಅನುಕೂಲವಾಗಲಿದೆ ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!