ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: 2 ಶ್ರಮಿಕ್ ರೈಲಿನಲ್ಲಿ ತವರಿಗೆ ಮರಳಿದ ವಲಸೆ ಕಾರ್ಮಿಕರು

ಲಾಕ್'ಡೌನ್ ನಿಂದ ನಗರದಲ್ಲಿ ಸಿಲುಕಿದ್ದ ಹೊರರಾಜ್ಯದ ಕಾರ್ಮಿಕರು, ವಿದ್ಯಾರ್ಥಿಗಳು, ಪ್ರಯಾಣಿಕನ್ನು ಎರಡು ಶ್ರಮಿಕ್ ವಿಶೇಷ ರೈಲುಗಳ ಮೂಲಕ ಬುಧವಾರ ಅವರ ತವರು ರಾಜ್ಯಗಳಿಗೆ ಕಳುಹಿಸಲಾಯಿತು. 

ಬೆಂಗಳೂರು: ಲಾಕ್'ಡೌನ್ ನಿಂದ ನಗರದಲ್ಲಿ ಸಿಲುಕಿದ್ದ ಹೊರರಾಜ್ಯದ ಕಾರ್ಮಿಕರು, ವಿದ್ಯಾರ್ಥಿಗಳು, ಪ್ರಯಾಣಿಕನ್ನು ಎರಡು ಶ್ರಮಿಕ್ ವಿಶೇಷ ರೈಲುಗಳ ಮೂಲಕ ಬುಧವಾರ ಅವರ ತವರು ರಾಜ್ಯಗಳಿಗೆ ಕಳುಹಿಸಲಾಯಿತು. 

ನಗರದ ಕೆಎಸ್ಆರ್ ರೈಲು ನಿಲ್ದಾಣದ ಹಾಗೂ ಹೊಸೂರು ರೈಲು ನಿಲ್ದಾಣಗಳಿಂದ ರಾಜಸ್ತಾನ ಮತ್ತು ಬಿಹಾರಕ್ಕೆ ತಲಾ ಒಂದೊಂದು ರೈಲು ತೆರಳಿದವು. 

ಪ್ರಯಾಣಕ್ಕೂ ಮುನ್ನ ಪ್ರತಿ ಪ್ರಯಾಣಿಕರನ್ನು ಥರ್ಮಲ್ ಸ್ಕ್ರೀನಿಂಗ ಒಳಪಡಿಸಲಾಯಿತು. ಈ ಎರಡೂ ರೈಲುಗಳಲ್ಲಿ ಸುಮಾರು ಸಾವಿರ ಕಾರ್ಮಿಕರು ತವರು ರಾಜ್ಯಗಳಿಗೆ ತೆರಳಿದ್ದರು. ಪ್ರತಿ ಪ್ರಯಾಣಿಕರಿಗೂ ಆಹಾರ ಪೊಟ್ಟಣ, ಬಿಸ್ಕೆಟ್ ಹಾಗೂ ನೀರಿನ ಬಾಟಲಿಗಳನ್ನು ವಿತರಿಸಲಾಗಿತ್ತು. 

ವಲಸಿಗರಿಂದ ಬೇಡಿಕೆ ಕಡಿಮೆಯಾಗುತ್ತಿದ್ದು, ಇದರ ಜೊತೆಗೆ ಪಶ್ಚಿಮ ಬಂಗಾಳ ಹಾಗೂ ಒಡಿಶಾ ರಾಜ್ಯ ಸರ್ಕಾರಗಳು ವಲಸೆ ಕಾರ್ಮಿಕರನ್ನು ರಾಜ್ಯಕ್ಕೆ ಸೇರಿಸಿಕೊಳ್ಳಲು ಹಿಂದೇಟು ಹಾಕುತ್ತಿವೆ. ಹೀಗಾಗಿ ರೈಲುಗಳ ಸಂಖ್ಯೆಯನ್ನು ಇಳಿಕೆ ಮಾಡಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. 

ವಲಸೆ ಕಾರ್ಮಿಕರನ್ನು ರಾಜ್ಯದೊಳಗೆ ಬಿಟ್ಟುಕೊಳ್ಳಲು ಪಶ್ಚಿಮ ಬಂಗಾಳ ನಿರಾಕರಿಸಿತ್ತು ಇದರ ಪರಿಣಾಮ ಬುಧವಾರ ಐದು ರೈಲುಗಳ ಸಂಚಾರವನ್ನು ನಿಷೇಧ ಮಾಡಲಾಗಿತ್ತು. ರೈಲು ಸಂಚಾರದ ವೇಳೆ ಸರ್ಕಾರ ನೀಡಿರುವ ಎಲ್ಲಾ ರೀದಿಯ ಮಾರ್ಗದರ್ಶನಗಳನ್ನು ಅನುಸರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?