ಸಾಂದರ್ಭಿಕ ಚಿತ್ರ 
ರಾಜ್ಯ

ಜೈ ಶ್ರೀರಾಮ್ ಹೇಳುವಂತೆ ಹಲ್ಲೆ: ಬಜರಂಗದಳದ ಮುಖಂಡ ಸೇರಿ ನಾಲ್ವರ ವಿರುದ್ಧ ಎಫ್ ಐಆರ್ 

ಬಾಲಕನೊಬ್ಬನಿಗೆ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ವಿಡಿಯೋ ವೈರಲ್ ಆದ ಪ್ರಕರಣಕ್ಕೆ ಸಂಬಂಧಿಸಿ ಬಜರಂಗದಳದ ಮುಖಂಡ ಸಹಿತ ನಾಲ್ವರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಬಾಲಕನೊಬ್ಬನಿಗೆ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ವಿಡಿಯೋ ವೈರಲ್ ಆದ ಪ್ರಕರಣಕ್ಕೆ ಸಂಬಂಧಿಸಿ ಬಜರಂಗದಳದ ಮುಖಂಡ ಸಹಿತ ನಾಲ್ವರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ಯಾನ ನಿವಾಸಿ, ಭಜರಂಗದಳದ ಮುಖಂಡ ದಿನೇಶ್ ಹಾಗೂ ಕೊಳ್ನಾಡು ಗ್ರಾಮದ 16 ವರ್ಷ ಪ್ರಾಯದ ಇಬ್ಬರು ಮತ್ತು ಕನ್ಯಾನ ಗ್ರಾಮದ 17 ವರ್ಷ ಪ್ರಾಯದ ಓರ್ವ ಹಲ್ಲೆ ನಡೆಸಿರುವ ಆರೋಪಿಗಳು.

ಏಪ್ರಿಲ್ 21ರಂದು 11 ಗಂಟೆ ಸುಮಾರಿಗೆ ನಾಲ್ವರು ಆರೋಪಿಗಳು ಬಾಲಕನನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿರುವುದಲ್ಲದೆ ಮೋಟಾರು ಸೈಕಲಿನಲ್ಲಿ ಕುಳ್ಳಿರಿಸಿ ಕಾಡುಮಠ ಪ್ರೌಢ ಶಾಲೆಯ ಮೈದಾನಕ್ಕೆ ಕರೆದುಕೊಂದು ಹೋಗಿ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದಾರೆ.

ಅಲ್ಲದೆ ಜೈ ಶ್ರೀರಾಮ್ ಹೇಳುವಂತೆ ಬಲವಂತ ಪಡಿಸಿರುವುದಲ್ಲದೆ ಬಾಲಕನ ಬಳಿ ಇದ್ದ ಹಣವನ್ನು ದೋಚಿದ್ದಾರೆ ಎಂದು ಬಾಲಕ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ