ಮುಖ್ಯಮಂತ್ರಿ ಯಡಿಯೂರಪ್ಪ 
ರಾಜ್ಯ

ಸಾಂತ್ವನ ಕೇಂದ್ರಗಳನ್ನು ಮುಂದುವರೆಸಲು ಮುಖ್ಯಮಂತ್ರಿಗಳ ಸೂಚನೆ

ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ದೌರ್ಜನ್ಯಕ್ಕೊಳಗಾಗಿರುವ ಮಹಿಳೆಯರಿಗೆ ಸಮಾಲೋಚನೆ ಸೇರಿದಂತೆ ಅಗತ್ಯ ನೆರವು ಒದಗಿಸುತ್ತಿರುವ ಸಾಂತ್ವನ ಯೋಜನೆಯನ್ನು ಮುಂದುವರೆಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಸೂಚಿಸಿದರು.

ಬೆಂಗಳೂರು: ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ದೌರ್ಜನ್ಯಕ್ಕೊಳಗಾಗಿರುವ ಮಹಿಳೆಯರಿಗೆ ಸಮಾಲೋಚನೆ ಸೇರಿದಂತೆ ಅಗತ್ಯ ನೆರವು ಒದಗಿಸುತ್ತಿರುವ ಸಾಂತ್ವನ ಯೋಜನೆಯನ್ನು ಮುಂದುವರೆಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಸೂಚಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಕೇಂದ್ರ ಪುರಸ್ಕೃತ ಯೋಜನೆಯಡಿಯಲ್ಲಿ ಒನ್ ಸ್ಟಾಪ್ ಕೇಂದ್ರಗಳನ್ನು ಪ್ರಾರಂಭಿಸಿರುವುದರಿಂದ ಸಾಂತ್ವನ ಯೋಜನೆಯನ್ನು ಸ್ಥಗಿತಗೊಳಿಸಲು ಈ ಹಿಂದೆ ತೀರ್ಮಾನಿಸಲಾಗಿತ್ತು. ಆದರೆ, ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಸಾಂತ್ವನ ಯೋಜನೆ ನೆರವು ನೀಡುತ್ತಿರುವುದರಿಂದ ಈ ಯೋಜನೆಯನ್ನು ಮುಂದುವರೆಸಲು ತೀರ್ಮಾನಿಸಲಾಯಿತು.

ಭಾಗ್ಯಲಕ್ಷ್ಮಿ ಯೋಜನೆಯನ್ನು ಅಂಚೆ ಇಲಾಖೆ ಜೊತೆ ಒಪ್ಪಂದ ಮಾಡಿಕೊಂಡು ಸುಕನ್ಯಾ ಸಮೃದ್ಧಿ ಯೋಜನೆಯಡಿ ಅನುಷ್ಠಾನಗೊಳಿಸಲು ಮುಖ್ಯಮಂತ್ರಿಗಳು ಸೂಚಿಸಿದರು. ಕೋವಿಡ್ 19 ಹಿನ್ನೆಲೆಯಲ್ಲಿ ಉಂಟಾದ ಲಾಕ್‍ಡೌನ್ ಸಂದರ್ಭದಲ್ಲಿ ಇಲಾಖೆಯು ಆಹಾರ ಧಾನ್ಯಗಳನ್ನು ಪ್ರತಿ ಫಲಾನುಭವಿಗಳ ಮನೆ ಬಾಗಿಲಿಗೆ ವಿತರಿಸಿದೆ. ಇದೇ ಅವಧಿಯಲ್ಲಿ 278 ಬಾಲ್ಯ ವಿವಾಹಗಳನ್ನು ತಡೆಹಿಡಿಯಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರು ಮಾಸ್ಕ್ ಗಳನ್ನು ಹೊಲಿದು ವಿತರಿಸಿದ್ದಾರೆ ಎಂದು  ಸಚಿವರಾದ ಶಶಿಕಲಾ ಜೊಲ್ಲೆ  ಮಾಹಿತಿ ನೀಡಿದರು.  

ಸಭೆಯಲ್ಲಿ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್, ನಿರ್ದೇಶಕ ಕೆ.ಎ.ದಯಾನಂದ್ , ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್