ರಾಜ್ಯ

ಕರ್ನಾಟಕಕ್ಕೆ ಕೊರೋನಾಘಾತ: ಒಂದೇ ದಿನ ದಾಖಲೆಯ 248 ಪಾಸಿಟಿವ್ ಪ್ರಕರಣ, ಸೋಂಕಿತರ ಸಂಖ್ಯೆ 2781ಕ್ಕೆ ಏರಿಕೆ

Lingaraj Badiger

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಆತಂಕಕಾರಿಯಾಗಿ ಏರಿಕೆಯಾಗುತ್ತಲೇ ಇದೆ. ಶುಕ್ರವಾರ ಒಂದೇ ದಿನ ಒಟ್ಟು 248 ಪ್ರಕರಣಗಳು ವರದಿಯಾಗಿವೆ. ಇದು ಇಲ್ಲಿಯವರೆಗೆ ದಾಖಲಾಗಿರುವ ಅತಿ ಹೆಚ್ಚಿನ ಸೋಂಕಿತ ಪ್ರಕರಣಗಳಾಗಿವೆ.

ಇವರಲ್ಲಿ 227 ಜನರು ಅಂತಾರಾಜ್ಯ ಪ್ರಯಾಣದ ಇತಿಹಾಸ ಹೊಂದಿದ್ದಾರೆ. ಓರ್ವ ವ್ಯಕ್ತಿ ಅಂತಾರಾಷ್ಟ್ರೀಯ ಪ್ರಯಾಣದಿಂದ ಹಿಂದಿರುಗಿದ್ದಾರೆ.

ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2781ಕ್ಕೇರಿಕೆಯಾಗಿದೆ. ಇಂದು ಒಂದೇ ದಿನ ರಾಜ್ಯದಲ್ಲಿ 60 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇಲ್ಲಿಯವರೆಗೆ ಒಟ್ಟು 894 ಜನರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಸದ್ಯ 1837 ಸಕ್ರಿಯ ಪ್ರಕರಣಗಳಿವೆ. ಸೋಂಕಿತರ ಪೈಕಿ 47 ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರು ನಗರದಲ್ಲಿ 12, ಮಂಡ್ಯದಲ್ಲಿ 2, ಕಲಬುರಗಿಯಲ್ಲಿ 61, ಯಾದಗಿರಿಯಲ್ಲಿ 60, ರಾಯಚೂರಿನಲ್ಲಿ 62, ಉಡುಪಿಯಲ್ಲಿ 15, ದಾವಣಗೆರೆಯಲ್ಲಿ 4, ಹಾಸನದಲ್ಲಿ 4, ಚಿಕ್ಕಬಳ್ಳಾಪುರದಲ್ಲಿ 5, ಮೈಸೂರಿನಲ್ಲಿ 2, ವಿಜಯಪುರದಲ್ಲಿ 4, ಬಳ್ಳಾರಿಯಲ್ಲಿ 9, ಧಾರವಾಡ, ಚಿತ್ರದುರ್ಗ, ಶಿವಮೊಗ್ಗದಲ್ಲಿ ತಲಾ 1, ತುಮಕೂರಿನಲ್ಲಿ 2, ಚಿಕ್ಕಮಗಳೂರಿನಲ್ಲಿ 2, ಬೆಂಗಳೂರು ಗ್ರಾಮಾಂತರದಲ್ಲಿ 1 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

SCROLL FOR NEXT