ರಾಜ್ಯ

ಕೆಎಸ್ ಒಯುನಲ್ಲಿ ದಾಖಲಾತಿ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ: ಅಶ್ವತ್ಥ ನಾರಾಯಣ

Shilpa D

ಬೆಂಗಳೂರು: ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವವರ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ ವಹಿಸುವ ಮೂಲಕ ಕಾರ್ಯಸೂಚಿ ರೂಪಿಸಲು ಉಪ ಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥ ನಾರಾಯಣ ಸೂಚಿಸಿದ್ದಾರೆ.

ಕರ್ನಾಟಕ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ತರಬೇತಿ ಕಾರ್ಯಕ್ರಮದ ಸಮಾರೋಪದಲ್ಲಿ ಆನ್‌ಲೈನ್‌ ಮೂಲಕ ಭಾಗವಹಿಸಿ ಮಾತನಾಡಿದ ಅವರು, ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವವರ ಪ್ರಮಾಣ ಹೆಚ್ಚಿಸುವಲ್ಲಿ ಮುಕ್ತ ವಿಶ್ವವಿದ್ಯಾಲಯ ಅತಿ ಮುಖ್ಯವಾದ ಪಾತ್ರವಹಿಸಬೇಕು

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನಾನಾ ವಿಷಯ ತಜ್ಞರನ್ನು ಈ ಕಾರ್ಯಕ್ರಮಕ್ಕೆ ನೋಂದಾಯಿಸಿಕೊಂಡು, ವಿದ್ಯಾರ್ಥಿಗಳಿಗೂ ಎಲ್ಲ ರೀತಿಯ ಸೌಕರ್ಯ ಕಲ್ಪಿಸಿ ಕೆ-ಸೆಟ್‌ ಪರೀಕ್ಷೆಗೆ ಉತ್ತಮ ತರಬೇತಿ ನೀಡಲಾಗಿದೆ ಎಂದರು.

ಮುಕ್ತ ವಿವಿ ವಿರುದ್ಧ ಹಣ ದುರ್ಬಳಕೆ ಸೇರಿ ಹಲವು ಆರೋಪಗಳಿದ್ದು, ಇಂತಹ ಕಳಂಕಗಳಿಂದ ಮುಕ್ತರಾಗಲು ಕ್ರಿಯಾ ಯೋಜನೆ ರೂಪಿಸಬೇಕು. ಉತ್ತಮ ಶಿಕ್ಷಣಕ್ಕೆ ವ್ಯವಸ್ಥೆ ಕಲ್ಪಿಸುವ ಜತೆಗೆ ಆಡಳಿತದಲ್ಲಿ ಪಾರದರ್ಶಕತೆಗೆ ಒತ್ತು ನೀಡಿ ಮಾದರಿ ವ್ಯವಸ್ಥೆ ತರಲು ಆದೇಶಿಸಲಾಗಿದೆ ಎಂದು ಅವರು ಹೇಳಿದರು.
 

SCROLL FOR NEXT