ರಾಜ್ಯ

ತಳವಾರ, ಪರಿವಾರ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ: ಗೆಜೆಟ್ ಅಧಿಸೂಚನೆಗೆ ಕಾರಜೋಳ ಆದೇಶ

Lingaraj Badiger

ಬೆಂಗಳೂರು: ತಳವಾರ, ಪರಿವಾರ ಹಾಗೂ ಕಾರವಾರ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯಲ್ಲಿರುವ ಸಿದ್ದಿ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರದ ಗೆಜೆಟ್ ಅಧಿಸೂಚನೆಯ ಅನುಸಾರ ರಾಜ್ಯದಲ್ಲೂ ಗೆಜೆಟ್ ಅಧಿಸೂಚನೆ ಹೊರಡಿಸಲು ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.

ಕುಲಶಾಸ್ತ್ರಿ ಅಧ್ಯಯನದಂತೆ ಪರಿವಾರ ಮತ್ತು ತಳವಾರ ಜಾತಿಗಳು ನಾಯಕ ಮತ್ತು ನಾಯಿಕಡದ ಪರ್ಯಾಯವಾಗಿವೆ. ಈ ಪ್ರಸ್ತಾವನೆಯು ಕಳೆದ ಹಲವಾರು ದಶಕಗಳಿಂದ ಬೇಡಿಕೆಯಲ್ಲಿತ್ತು. ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಎಲ್ಲಾ ಪೂರಕ ಮಾಹಿತಿಯನ್ನು ಸಲ್ಲಿಸಲಾಯಿತು. ಕೇಂದ್ರ ಸರ್ಕಾರವು ಈ ಪ್ರಸ್ತಾವನೆಯನ್ನು ಸಂಸತ್ ನಲ್ಲಿ ಅಂಗೀಕರಿಸಿ, ಗೆಜೆಟ್ ಅಧಿಸೂಚನೆ ಹೊರಡಿಸಿದ ಆಧಾರದಡಿ, ರಾಜ್ಯ ಸರ್ಕಾರವು ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಆದೇಶಿಲಾಗಿದೆ.

ಈ ಅಧಿಸೂಚನೆಯಂತೆ ಈ‌ ಸಮುದಾಯದವರಿಗೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ನೀಡಲು ಅವಕಾಶವಿರುತ್ತದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಸಮಾಜ ಕಲ್ಯಾಣ ಇಲಾಖೆಯ ಪರವಾಗಿ ಅಭಿನಂದಿಸುವುದಾಗಿ ಅವರು ತಿಳಿಸಿದ್ದಾರೆ.

SCROLL FOR NEXT