ರಾಜ್ಯದಲ್ಲಿ ತಗ್ಗಿದ ಕೊರೋನಾ ಹಾವಳಿ: ಇಂದು 3,652 ಸೋಂಕು ಪತ್ತೆ, 8,053 ಡಿಸ್ಚಾರ್ಜ್!
ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಕಡಿಮೆಯಾಗುತ್ತಿದ್ದು, ಇಂದು 3,652 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 8,27,064ಕ್ಕೆ ಏರಿಕೆಯಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಕಡಿಮೆಯಾಗುತ್ತಿದ್ದು, ಇಂದು 3,652 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 8,27,064ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ 24 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 11,192ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು 8,053 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 7,65,261ಕ್ಕೆ ಏರಿಕೆಯಾಗಿದೆ. 50,592 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2,167 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 3,38,636ಕ್ಕೆ ಏರಿಕೆಯಾಗಿದೆ.