ರಾಜ್ಯ

ಕನ್ನಡ ರಾಜ್ಯೋತ್ಸವ ಎಂದರೆ ಕನ್ನಡತನವನ್ನು ಉಳಿಸಿ-ಬೆಳೆಸಲು ದುಡಿದ-ಮಡಿದ ಹಿರಿಯ ಮಹಾಪುರುಷರಿಗೆ ತಲೆಬಾಗುವ ದಿನ: ಮಾಜಿ ಸಿಎಂ ಸಿದ್ದರಾಮಯ್ಯ

Manjula VN

ಬೆಂಗಳೂರು: 65ನೇ ಕನ್ನಡ ರಾಜ್ಯೋತ್ಸವ ದಿನ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಶುಭಾಶಯಗಳನ್ನು ಕೋರಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕನ್ನಡ ರಾಜ್ಯೋತ್ಸವ ಎಂದರೆ..ನಮ್ಮ ಜನ,ಭಾಷೆ, ಸಂಸ್ಕೃತಿ, ನೆಲ, ಜಲ ಎಲ್ಲವನ್ನೂ ಒಳಗೊಂಡ ಕನ್ನಡತನವನ್ನು ಉಳಿಸಿ-ಬೆಳೆಸಲು ದುಡಿದ-ಮಡಿದ ಹಿರಿಯ ಮಹಾಪುರುಷರಿಗೆ ತಲೆಬಾಗುವ ದಿನ. ಆ ಪುಣ್ಯಪುರುಷರನ್ನು ಒಡಲಾಳದ ಕೃತಜ್ಞತೆಯಿಂದ ಸ್ಮರಿಸೋಣ. ಕನ್ನಡ ಮೊದಲು, ನಾನು ಮೊದಲು ಕನ್ನಡಿಗ ಎಂದು ಹೇಳಿದ್ದಾರೆ. 

ಮತ್ತೊಂದು ಟ್ವೀಟ್ ನಲ್ಲಿ ಶುಭಾಶಯ ಕೋರಿ, ಕನ್ನಡ ರಾಜ್ಯೋತ್ಸವ ಎಂದರೆ ನಮ್ಮ ಜನ, ಭಾಷೆ, ಸಂಸ್ಕೃತಿ, ನೆಲ, ಜಲ ಎಲ್ಲವನ್ನೂ ಒಳಗೊಂಡ ಕನ್ನಡತನವನ್ನು ಉಳಿಸಿ-ಬೆಳೆಸುವ ಪುಣ್ಯದ ಕೆಲಸಕ್ಕೆ ನಮ್ಮನ್ನು ಮತ್ತೆ ಮತ್ತೆ ಸಮರ್ಪಿಸಿಕೊಳ್ಳುವ ದಿನ. ಕನ್ನಡಿಗರೆಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದು ಹೇಳಿದ್ದಾರೆ. 

SCROLL FOR NEXT