ಅಶೋಕ್ ಗಸ್ತಿ 
ರಾಜ್ಯ

ಅಶೋಕ್ ಗಸ್ತಿಯವರಿಂದ ತೆರವಾದ ರಾಜ್ಯಸಭೆ ಸ್ಥಾನಕ್ಕೆ ಚುನಾವಣೆ ದಿನಾಂಕ ಪ್ರಕಟ

ಕೋವಿಡ್ ನಿಂದಾಗಿ ಸೆಪ್ಟೆಂಬರ್ 17ರಂದು ನಿಧನರಾದ ಸಂಸದ  ಅಶೋಕ್ ಗಸ್ತಿ ಅವರಿಂದ ತೆರವಾದ ಕರ್ನಾಟಕದ ಒಂದು ರಾಜ್ಯಸಭಾ ಸ್ಥಾನಕ್ಕೆ ಉಪಚುನಾವಣೆಯ ದಿನಾಂಕವನ್ನು  ಚುನಾವಣಾ ಆಯೋಗ ಪ್ರಕಟಿಸಿದೆ.

ನವದೆಹಲಿ: ಕೋವಿಡ್ ನಿಂದಾಗಿ ಸೆಪ್ಟೆಂಬರ್ 17ರಂದು ನಿಧನರಾದ ಸಂಸದ  ಅಶೋಕ್ ಗಸ್ತಿ ಅವರಿಂದ ತೆರವಾದ ಕರ್ನಾಟಕದ ಒಂದು ರಾಜ್ಯಸಭಾ ಸ್ಥಾನಕ್ಕೆ ಉಪಚುನಾವಣೆಯ ದಿನಾಂಕವನ್ನು  ಚುನಾವಣಾ ಆಯೋಗ ಪ್ರಕಟಿಸಿದೆ.

ಆಯೋಗದ ಪ್ರಕಟಣೆಯಂತೆ ಡಿಸೆಂಬರ್ 1ರಂದು ಮತದಾನ ಮತ್ತು ಮತ ಎಣಿಕೆ ನಡೆಯಲಿದೆ.

ಬಿಜೆಪಿ ಮುಖಂಡರಾದ ಗಸ್ತಿ ಅವರು ಜುಲೈನಲ್ಲಿ ಮೊದಲ ಬಾರಿಗೆ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದರು ಆದರೆ ಕೋವಿಡ್ -19 ಕಾರಣ ಸಂಸತ್ತಿನ ಯಾವುದೇ ಅಧಿವೇಶನಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ.

ಚುನಾವಣಾ ಸಂಬಂಧಿತ ಚಟುವಟಿಕೆಗಳಲ್ಲಿ ಭಾಗಿಯಾಗುವ ಎಲ್ಲರೂ ಫೇಸ್ ಮಾಸ್ಕ್ ಧರಿಸಬೇಕು ಎಂದು ಆಯೋಗ ಹೇಳಿದೆ.

ಡಿಸೆಂಬರ್ 1ರಂದು ರಾಜ್ಯಸಭೆ ಸ್ಥಾನಕ್ಕಾಗಿನ ಚುನಾವಣೆ ಜತೆಗೇ ಉತ್ತರ ಪ್ರದೇಶ ವಿಧಾನ ಪರಿಷತ್ತಿನ 11 ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಮತ್ತು ಮಹಾರಾಷ್ಟ್ರ ವಿಧಾನ ಪರಿಷತ್ತಿನ  ಐದು ಸ್ಥಾನಗಳಿಗೆ ಚುನಾವಣೆ ನಡೆಯುತ್ತದೆ ಎಂದು ಪ್ರಕಟಣೆ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT