ಸಾಂದರ್ಭಿಕ ಚಿತ್ರ 
ರಾಜ್ಯ

ಪ್ರಾಂಶುಪಾಲರು, ಶಿಕ್ಷಕರಿಗೆ ವೇತನ ಬಾಕಿ: ಸ್ವ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಲೋಕಾಯುಕ್ತರು

ರಾಜ್ಯದಲ್ಲಿರುವ 450 ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳ ಕನಿಷ್ಠ 532 ಪ್ರಾಂಶುಪಾಲರು ಮತ್ತು ಶಿಕ್ಷಕರಿಗೆ ಕಳೆದ ಏಳು ತಿಂಗಳಿನಿಂದ ವೇತನವೇ ಸಿಕ್ಕಿಲ್ಲ. 

ಬೆಂಗಳೂರು: ರಾಜ್ಯದಲ್ಲಿರುವ 450 ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳ ಕನಿಷ್ಠ 532 ಪ್ರಾಂಶುಪಾಲರು ಮತ್ತು ಶಿಕ್ಷಕರಿಗೆ ಕಳೆದ ಏಳು ತಿಂಗಳಿನಿಂದ ವೇತನವೇ ಸಿಕ್ಕಿಲ್ಲ. ಈ ಬಗ್ಗೆ ಇದೀಗ ಕರ್ನಾಟಕ ಲೋಕಾಯುಕ್ತ ಜಸ್ಟೀಸ್ ವಿಶ್ವನಾಥ ಶೆಟ್ಟಿ ಸ್ವಯಂ ಪ್ರೇರಿತವಾಗಿ ಕೇಸು ದಾಖಲಿಸಿಕೊಂಡು ಸಮಾಜ ಕಲ್ಯಾಣ ಇಲಾಖೆಗೆ ಶಿಕ್ಷಕರ ದೂರು-ದುಮ್ಮಾನಗಳು ಮತ್ತು ಸಂಕಷ್ಟಗಳನ್ನು ಆದಷ್ಟು ಬೇಗನೆ ಬಗೆಹರಿಸುವಂತೆ ಹೇಳಿದ್ದಾರೆ.

ಉದ್ಯೋಗಿಗೆ ಪಾವತಿಸುವ ವೇತನವು ಅನಪೇಕ್ಷಿತ ಪಾವತಿಗಳಲ್ಲ ಎಂದು ಗಮನಸೆಳೆಯುವ ಅಗತ್ಯವಿಲ್ಲ. ಒಬ್ಬ ನೌಕರನು ಅವನು / ಅವಳು ಕೈಗೊಂಡ ಕೆಲಸಕ್ಕಾಗಿ ಗಳಿಸಿದ ಮೊತ್ತವಾಗಿರುತ್ತದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಶೆಟ್ಟಿ ರಾಜ್ಯ ಸರ್ಕಾರವನ್ನು ನೆನಪಿಸಿದರು, ಪ್ರಾಂಶುಪಾಲರು ಮತ್ತು ಶಿಕ್ಷಕರಿಗೆ ಸಂಬಳ ನೀಡುವಲ್ಲಿ ವಿಳಂಬವು ಅವರ ಜೀವನ ಹಕ್ಕಿನ ಮೇಲೆ ಗಂಭೀರವಾಗಿ ಪರಿಣಾಮ ಬೀರುತ್ತದೆ (ಸಂವಿಧಾನದ 21 ನೇ ವಿಧಿ ), ಮತ್ತು ಈ ಶಾಲೆಗಳಲ್ಲಿ ಓದುವ ಮಕ್ಕಳ ಶಿಕ್ಷಣ ಗುಣಮಟ್ಟದ ಮೇಲೆ ಸಹ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಈ ಬಗ್ಗೆ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಿಗೆ ನೊಟೀಸ್ ಜಾರಿಗೊಳಿಸಲು ಸಹ ಲೋಕಾಯುಕ್ತರು ಆದೇಶ ನೀಡಿದರು.
ಈ ಶಾಲೆಗಳು ಸಮಾಜ ಕಲ್ಯಾಣ ಇಲಾಖೆಯಡಿ ಬರುತ್ತಿದ್ದು, ಪ್ರಾಂಶುಪಾಲರು ಮತ್ತು ಶಿಕ್ಷಕರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಗುತ್ತಿಗೆ ನೌಕರರಿಗೆ ವೇತನ ನೀಡಬೇಕೆಂದು ಕಳೆದ ಆಗಸ್ಟ್ 26ರಂದು ಸರ್ಕಾರ ಹೇಳಿದರೂ ಕೂಡ ಪ್ರಾಂಶುಪಾಲರು ಮತ್ತು ಶಿಕ್ಷಕರಿಗೆ ಇನ್ನೂ ವೇತನ ಬಿಡುಗಡೆಯಾಗಿಲ್ಲ ಎಂದು ತಿಳಿದುಬಂದಿದೆ.

ಬಾಕಿ ಉಳಿಕೆ ವೇತನವನ್ನು ಆದಷ್ಟು ಶೀಘ್ರವೇ ಬಿಡುಗಡೆ ಮಾಡುವಂತೆ ಹಿಂದಿನ ಸಮಾಜ ಕಲ್ಯಾಣ ಇಲಾಖೆ ಸಚಿವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದರೂ, ಅದಿನ್ನೂ ಕಾರ್ಯಗತವಾಗಿಲ್ಲ, ವೇತನ ಸಿಕ್ಕಿಲ್ಲ ಎಂಬ ಚಿಂತೆ ಒಂದೆಡೆಯಾದರೆ ಎಸ್ ಎಸ್ ಎಲ್ ಸಿ ಪರೀಕ್ಷೆ ಮರು ಮೌಲ್ಯಮಾಪನ ಮತ್ತು ಇನ್ನೂ ಹಲವು ಕರ್ತವ್ಯಗಳು ಈ ಶಿಕ್ಷಕರಿಗಿವೆ.

ಈ ಬಗ್ಗೆ ಮೂರು ವಾರಗಳಲ್ಲಿ ವರದಿ ನೀಡುವಂತೆ ಇಲಾಖೆಯ ಅಧಿಕಾರಿಗಳಿಗೆ ಲೋಕಾಯುಕ್ತರು ಆದೇಶ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

Minneapolis Shooter: 'Trump ಸಾವು.. ಭಾರತ ಸರ್ವನಾಶ': ಅಮೆರಿಕ ದಾಳಿಕೋರನ ಬಂದೂಕಿನ ಮೇಲೆ ಶಾಕಿಂಗ್ ಬರಹ!

SCROLL FOR NEXT