ಮೊಹಮದ್ ನಲಪಾಡ್ 
ರಾಜ್ಯ

ಪ್ರವಾಹ ಪರಿಸ್ಥಿತಿ ನಿಭಾಯಿಸಲು ಸಲಹೆ ನೀಡಿ, ಐಫೋನ್ ಗೆಲ್ಲಿ: ಯೂತ್ ಕಾಂಗ್ರೆಸ್ ಹೊಸ ಅಭಿಯಾನ

ರಾಜ್ಯದಲ್ಲಿ ಪದೇ ಪದೇ ಪ್ರವಾಹ ಪರಿಸ್ಥಿತಿ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಯುವಕರ ತಂಡವೊಂದು ಲೆಟ್ಸ್ ಟೇಕ್ ಚಾರ್ಜ್ ಎಂಬ 7 ದಿನಗಳ ಶಿಬಿರ ಹಮ್ಮಿಕೊಂಡಿದೆ.

ಬೆಂಗಳೂರು: ರಾಜ್ಯದಲ್ಲಿ ಪದೇ ಪದೇ ಪ್ರವಾಹ ಪರಿಸ್ಥಿತಿ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಯುವಕರ ತಂಡವೊಂದು ಲೆಟ್ಸ್ ಟೇಕ್ ಚಾರ್ಜ್ ಎಂಬ 7 ದಿನಗಳ ಶಿಬಿರ ಹಮ್ಮಿಕೊಂಡಿದೆ.

ಬೆಂಗಳೂರು ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮದ್ ನಲಪಾಡ್ ಅಧ್ಯಕ್ಷತೆಯಲ್ಲಿ ಶಿಬಿರ ಆರಂಭವಾಗಿದ್ದು ಪ್ರವಾಹ ಪೀಡಿತರಿಗೆ ನೆರವು ನೀಡಲು ಸಲಹೆ ಮತ್ತು ಐಡಿಯಾ ಕೇಳಲಾಯಿತು.

ಮೊದಲ ದಿನದಲ್ಲೇ 10 ಸಾವಿರ ಪ್ರವೇಶಕ್ಕೆ ಅರ್ಜಿ ಬಂದಿದೆ. ಈ ಸರಣಿಯ ಮೊದಲ ಭಾಗವು ಕರ್ನಾಟಕದ, ವಿಶೇಷವಾಗಿ ಬೆಂಗಳೂರಿನ ಮೂಲಸೌಕರ್ಯ ಸಮಸ್ಯೆಗಳನ್ನು ನಿಭಾಯಿಸಲಿದೆ. ಉತ್ತಮ ಸಲಹೆ ನೀಡಿದ ವ್ಯಕ್ತಿಗೆ ಬಹುಮಾನ ಕೂಡ ನೀಡಲಾಗುವುದು.

ಈ ಸ್ಪರ್ಧೆಯು ಅದರ ಗಂಭೀರತೆಯನ್ನು ಕಳೆದುಕೊಳ್ಳುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು, ನಾಲ್ಕು ಮೊದಲ ಉತ್ತಮ ಸಲಹೆ ನೀಡಿದವರಿಗೆ ಐಪೋನ್ 12,ಸ್ಯಾಮಸಂಗ್ ಗ್ಯಾಲಕ್ಸಿ ಎ51, ಮತ್ತು ಸ್ಯಾಮ್ ಸಂಗ್ ಗ್ಸಾಲಕ್ಸಿ ಎ 21  ಮತ್ತು ಸ್ಯಾಮ್ ಸಂಗ್ ಗ್ಯಾಲಕ್ಸಿ ಟ್ಯಾಬ್ ಎ ನೀಡಲಾಗುವುದು ಎಂದು ನಲಪಾಡ್ ತಿಳಿಸಿದ್ದಾರೆ.

ಜನರು ನೀಡುವ ಎಲ್ಲಾ ಸಲಹೆಗಳನ್ನು ತಜ್ಞರ ಸಮಿತಿಯು ಪರಿಶೀಲಿಸುತ್ತದೆ, ಅವರು ಸುಗಮ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಅವರ ಪ್ರಾಯೋಗಿಕವಾಗಿ ಕೆಲಸ ಮಾಡುತ್ತಾರೆ ಎಂದು ತಿಳಿಸಿದ್ದಾರೆ.

ಮೊದಲ ದಿನದ ಕೆಲವು ಸಲಹೆಗಳಲ್ಲಿ ಮೂಲಸೌಕರ್ಯ ಬದಲಾವಣೆಗಳು ಮತ್ತು ಜನರ ಸಮಸ್ಯೆಗಳನ್ನು ಪರಿಹರಿಸಬಹುದಾದ ನಿಯಮ ಬದಲಾವಣೆಗಳು ಸೇರಿವೆ.

ಅಭಿಯಾನದ ಕುರಿತು ಮಾತನಾಡಿದ ಅವರು, ಕರ್ನಾಟಕದಲ್ಲಿ 18-35 ವರ್ಷದೊಳಗಿನ ಯಾವುದೇ ವ್ಯಕ್ತಿ ಈ ಅಭಿಯಾನದಲ್ಲಿ ಭಾಗವಹಿಸಬಹುದಾಗಿದೆ, ಅಭಿಯಾನದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಸಂಖ್ಯೆ 9999835988 ಅನ್ನು ಪ್ರಾರಂಭಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT