ಬೆಂಗಳೂರು: ದಿನ ಕಳೆದಂತೆ ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಕಡಿಮೆಯಾಗುತ್ತಿದ್ದು, ಇಂದು 2,756 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 8,32,396ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ 26 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 11,247ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು 7,140 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 7,80,735ಕ್ಕೆ ಏರಿಕೆಯಾಗಿದೆ. 40,395 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1,479 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 3,41,554ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಇಂದು 13 ಮಂದಿ ಸಾವನ್ನಪ್ಪಿದ್ದಾರೆ.