ಪಿಪಿ ಕಿಟ್ ಧರಿಸಿರುವ ಅಧಿಕಾರಿಗಳು 
ರಾಜ್ಯ

ಶಿರಾದಲ್ಲಿ ಶೇ.82.13 ಮತ್ತು ಆರ್‌.ಆರ್‌.ನಗರದಲ್ಲಿ ಶೇ.45.24 ಮತದಾನ ದಾಖಲು: ಕೊರೋನಾ ಸೋಂಕಿತರಿಂದಲೂ ಮತದಾನ

ಭಾರಿ ಕುತೂಹಲ ಕೆರಳಿಸಿದ್ದ ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮಂಗಳವಾರ ಶಾಂತಿಯುತ ಮತದಾನ ನಡೆಯಿತು. ಶಿರಾದಲ್ಲಿ ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದರೆ, ಆರ್ ಆರ್ ನಗರದಲ್ಲಿ ಜನರು ಅತಿ ಕಡಿಮೆ ಉತ್ಸಾಹ ತೋರಿಸಿದ್ದಾರೆ.

ಬೆಂಗಳೂರು: ಭಾರಿ ಕುತೂಹಲ ಕೆರಳಿಸಿದ್ದ ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮಂಗಳವಾರ ಶಾಂತಿಯುತ ಮತದಾನ ನಡೆಯಿತು. ಶಿರಾದಲ್ಲಿ ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದರೆ, ಆರ್ ಆರ್ ನಗರದಲ್ಲಿ ಜನರು ಅತಿ ಕಡಿಮೆ ಉತ್ಸಾಹ ತೋರಿಸಿದ್ದಾರೆ.

ಮತದಾನದ ಅಂತ್ಯಗೊಂಡಾಗ ಶಿರಾದಲ್ಲಿ ಶೇ. 82.13 ಮತ್ತು ರಾಜರಾಜೇಶ್ವರಿ ನಗರದಲ್ಲಿ ಶೇ.45.24ರಷ್ಟು ಮತದಾನ ದಾಖಲಾಗಿದೆ ಎಂದು ಚುನಾವಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಇದೇ ಮೊದಲ ಬಾರಿಗೆ ಸಂಜೆ 5ರ ನಂತರ ಕೋವಿಡ್ ಸೋಂಕಿತರಿಗೆ ಕೂಡ ಅವಕಾಶ ಕಲ್ಪಿಸಲಾಗಿತ್ತು. ಶಿರಾ ಕ್ಷೇತ್ರದಲ್ಲಿ ಒಟ್ಟು 105 ಸೋಂಕಿತರು ಮತ ಚಲಾಯಿಸಿದ್ದಾರೆ. ಆರ್ ಆರ್.ನಗರದಲ್ಲಿ ಯಾವುದೇ ಸೋಂಕಿತರು ಮತ ಹಾಕಲು ಮುಂದೆ ಬಂದಿಲ್ಲ. ಈ ಸೋಂಕಿತರಿಗೆ ಮತಚಲಾಯಿಸಲು ಅವಕಾಶ ಕಲ್ಪಿಸಲು ವಿಶೇಷ ವ್ಯವಸ್ಥೆ ಕಲ್ಪಿಸಲಾಗಿತ್ತು. ಮತಗಟ್ಟೆ ಸಿಬ್ಬಂದಿ ಮತ್ತು ಮತ ಚಲಾಯಿಸುವವರು ಪಿಪಿಇ ಕಿಟ್ ಧರಿಸಿ ಸುರಕ್ಷತಾ ಕ್ರಮಗಳನ್ನು ಪಾಲಿಸಿದ್ದರು.

ಎರಡೂ ಕ್ಷೇತ್ರಗಳಿಂದ ಒಟ್ಟು 52 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಅಂತಿಮವಾಗಿ ನಾಲ್ವರು ಮಹಿಳೆಯರು ಸೇರಿ 31 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಎರಡು ಕ್ಷೇತ್ರಗಳಲ್ಲಿ ಒಟ್ಟು 6,77,926 ಮತದಾರರಿದ್ದು, 86 ಸೇವಾ ಮತದಾರರಿದ್ದಾರೆ.

ಶಾಂತಿಯುತ ಮತದಾನಕ್ಕೆ ಸಹಕರಿಸಿದ ಪ್ರತಿಯೊಬ್ಬರಿಗೂ ಹಾಗೂ ಕೋವಿಡ್ ಸೋಂಕಿನ ಬಾಧೆಯ ನಡುವೆಯೂ ತಮ್ಮ ಹಕ್ಕು ಚಲಾಯಿಸಿದ ಸೋಂಕಿತರಿಗೆ ಚುನಾವಣಾಧಿಕಾರಿ ಧನ್ಯವಾದ ಸಮರ್ಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT