ಯಡಿಯೂರಪ್ಪ 
ರಾಜ್ಯ

ಸುರಕ್ಷತೆ ನಿಯಮ ಪಾಲಿಸಿ ಹೆಚ್ಚಿನ ಸಂಖ್ಯೆಯಲ್ಲಿ ಹಕ್ಕು ಚಲಾಯಿಸಿ; ಮುಖ್ಯಮಂತ್ರಿ ಬಿಎಸ್ ವೈ ಮನವಿ

ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ಉಪ ಚುನಾವಣೆ ಮತದಾನ ಚಾಲ್ತಿಯಲ್ಲಿರುವಂತೆಯೇ ಸಿಎಂ ಬಿಎಸ್ ಯಡಿಯೂರಪ್ಪ ಸುರಕ್ಷತೆ ನಿಯಮ ಪಾಲಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನದ ಹಕ್ಕು ಚಲಾಯಿಸುವಂತೆ ಮತದಾರರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ಉಪ ಚುನಾವಣೆ ಮತದಾನ ಚಾಲ್ತಿಯಲ್ಲಿರುವಂತೆಯೇ ಸಿಎಂ ಬಿಎಸ್ ಯಡಿಯೂರಪ್ಪ ಸುರಕ್ಷತೆ ನಿಯಮ ಪಾಲಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನದ ಹಕ್ಕು ಚಲಾಯಿಸುವಂತೆ ಮತದಾರರಿಗೆ ಮನವಿ ಮಾಡಿದ್ದಾರೆ.

ಉಪ ಚುನಾವಣೆಯಲ್ಲಿ ಎಲ್ಲ ಸುರಕ್ಷತೆ ನಿಯಮಗಳನ್ನು ಪಾಲಿಸಿ ಹೆಚ್ಚಿನ ಸಂಖ್ಯೆಯಲ್ಲಿ ಹಕ್ಕು ಚಲಾಯಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವಿಟರ್ ನಲ್ಲಿ ಮನವಿ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇಂದು ರಾಜ್ಯದಲ್ಲಿ ನಡೆಯುತ್ತಿರುವ ಶಿರಾ ಮತ್ತು ರಾಜರಾಜೇಶ್ವರಿ ವಿಧಾನಸಭಾ  ಕ್ಷೇತ್ರಗಳ ಉಪಚುನಾವಣೆಯಲ್ಲಿ ಮತದಾರರು, ಎಲ್ಲಾ ಸುರಕ್ಷತಾ ನಿಯಮಗಳನ್ನು ಪಾಲಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಮತದಾನದ ಹಕ್ಕನ್ನು ಚಲಾಯಿಸಿ ಎಂದು ಕೋರುತ್ತೇನೆ ಎಂದು ತಿಳಿಸಿದ್ದಾರೆ.

ಬೆಳಗ್ಗೆ ಏಳು ಗಂಟೆಯಿಂದಲೇ ಉಭಯ ಕ್ಷೇತ್ರಗಳಲ್ಲೂ ಮತದಾನ ಆರಂಭಗೊಂಡಿದ್ದು, ಬೆಳಗ್ಗೆಯಿಂದಲೇ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದ ದೃಶ್ಯ ಎರಡೂ ಕ್ಷೇತ್ರಗಳಲ್ಲಿ ಕಂಡುಬಂದಿದೆ. 

ಆರ್.ಆರ್.ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ, ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಮತ್ತು ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ನಡುವೆ ಸ್ಪರ್ಧೆ ಇದೆ. ಇನ್ನು ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್‍ಗೌಡ, ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಟಿ.ಬಿ.ಜಯಚಂದ್ರ,  ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ನಡುವೆ ನೇರ ಸ್ಪರ್ಧೆ ಇದೆ. ಶಿರಾ ಕ್ಷೇತ್ರದಲ್ಲಿ 17 ಅಭ್ಯರ್ಥಿಗಳು ಕಣದಲ್ಲಿದ್ದು, 330 ಮತಗಟ್ಟೆಗಳಿವೆ. ಪುರುಷ ಮತದಾರರು 1 ಲಕ್ಷದ 10 ಸಾವಿರದ 281 ಮಂದಿ ಇದ್ದರೆ, ಮಹಿಳಾ ಮತದಾರರು 1 ಲಕ್ಷದ 5 ಸಾವಿರದ 434 ಮಂದಿ ಇದ್ದು, ಒಟ್ಟು ಮತದಾರರು 2 ಲಕ್ಷದ 15 ಸಾವಿರದ 725  ಮಂದಿ ಇದ್ದಾರೆ. ಆರ್ ಆರ್ ನಗರದಲ್ಲಿ 4 ಲಕ್ಷದ 62 ಸಾವಿರ ಮಂದಿ ಮತದಾರರಿದ್ದಾರೆ.

ಕೊರೊನಾ ಕಾರಣದಿಂದ ಪ್ರಜಾಪ್ರಭುತ್ವದ ಅಮೂಲ್ಯ ಹಕ್ಕಾದ ಮತದಾನದ ಹಕ್ಕಿನಿಂದ ಯಾರೂ ವಂಚಿತರಾಗಬಾರದು. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಸೋಂಕಿತರು, ಐಸೋಲೇಷನ್‍ನಲ್ಲಿರೋರು, ಕ್ವಾರಂಟೈನ್‍ನಲ್ಲಿರೋರಿಗೆ ಮತದಾನಕ್ಕೆ ವ್ಯವಸ್ಥೆ ಕಲ್ಪಿಸಿದೆ. ಆರ್ ಆರ್ ನಗರ ಕ್ಷೇತ್ರದಲ್ಲಿ ಬಿಬಿಎಂಪಿ  ಮಾಹಿತಿ ಪ್ರಕಾರ 148 ಮಂದಿ ಕೊರೋನಾ ಸೋಂಕಿತರಿಗೆ ಇವತ್ತಿನ ಉಪಚುನಾವಣೆಯಲ್ಲಿ ಮತದಾನದ ಹಕ್ಕಿದೆ. ಕೊರೊನಾ ಸೋಂಕಿತರು ಸಂಜೆ 5 ಗಂಟೆ ನಂತರ ಮತದಾನ ಮಾಡಬಹುದಾಗಿದೆ.

ಜೆಡಿಎಸ್​ ಅಭ್ಯರ್ಥಿ ಕೃಷ್ಣಮೂರ್ತಿ ಅವರು ಬೆಳಗ್ಗೆಯೇ ಜ್ಞಾನಭಾರತಿ ವಾರ್ಡ್‌ನಲ್ಲಿರುವ ಹೆಚ್​ಎಂಆರ್​ ಕಾನ್ವೆಂಟ್​ನ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT