ಅಕ್ರಮ ಆಸ್ತಿ ಪ್ರಕರಣದಲ್ಲಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಿರಾಳರಾಗಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಅವರ ವಿರುದ್ಧ ದಾಖಲಾಗಿದ್ದ ಮೂರು ಪ್ರಕರಣಗಳನ್ನು ವಾಪಾಸ್ ಪಡೆದ ನಂತರ ಅವರಿಗೆ ನೆಮ್ಮದಿಯಾಗಿದೆ.
ಶಿವಮೊಗ್ಗ/ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಿರಾಳರಾಗಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಅವರ ವಿರುದ್ಧ ದಾಖಲಾಗಿದ್ದ ಮೂರು ಪ್ರಕರಣಗಳನ್ನು ವಾಪಾಸ್ ಪಡೆದ ನಂತರ ಅವರಿಗೆ ನೆಮ್ಮದಿಯಾಗಿದೆ.
ಶಿವಮೊಗ್ಗ ಮೂಲದ ವಕೀಲರಾದ ಬಿ. ವಿನೋದ್ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಪ್ರಕರಣ ದಾಖಲಿಸಿದ್ದರು. ಇಂದು ಈ ಸಂಬಂಧ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಬೇಕಾಗಿತ್ತು.
ಆದರೆ ದೂರು ದಾಖಲಿಸಿದ್ದ ವಕೀಲ ವಿನೋದ್ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರ ಮುಂದೆ ಹಾಜರಾಗಿ ತಾವು ದಾಖಲಿಸಿದ ಮೂರು ಪ್ರಕರಣಗಳನ್ನು ಹಿಂದಕ್ಕೆ ಪಡೆಯುವುದಾಗಿ ಹೇಳಿದ್ದಾರೆ. ವಕೀಲರ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ.
ಸಿಎಂ ಯಡಿಯೂರಪ್ಪ ತಾವು ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ವೇಳೆ ಹುಣಸೇಕಟ್ಟೆ, ಕೋಟೆಗಂಗೂರು ಮತ್ತು ಕೆಹೆಚ್‌ಬಿ ಕಾಲೋನಿಗಳಲ್ಲಿ ಅಧಿಕಾರ ಬಳಸಿ ಅಕ್ರಮ ಆಸ್ತಿ ಸಂಪಾದಿಸಿದ್ದಾರೆಂದು ವಿನೋದ್ ಪ್ರಕರಣ ದಾಖಲಿಸಿದ್ದರು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.