ರಾಜ್ಯ

ರಾಜ್ಯದ ಎಲ್ಲಾ ಹಳ್ಳಿಗಳಿಗೂ ಶುದ್ಧ ಕುಡಿಯುವ ನೀರು ಪೂರೈಕೆ: ಕೆ.ಎಸ್. ಈಶ್ವರಪ್ಪ

Shilpa D

ಶಿವಮೊಗ್ಗ: ಜಲ ಜೀವನ ಮಿಷನ್ ಅಡಿಯಲ್ಲಿ ಪ್ರಸಕ್ತ ವರ್ಷ ರಾಜ್ಯದ 23.57 ಲಕ್ಷ ಮನೆಗಳಿಗೆ ನಲ್ಲಿಗಳ ಮೂಲಕ ನೀರು ತಲುಪಿಸುವ ಗುರಿ ಹೊಂದಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. 

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಕೇಂದ್ರ ಜಲಶಕ್ತಿ ಸಚಿವರ ಜತೆ ನಡೆದ ವಿಡಿಯೊ ಸಂವಾದದಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯದಲ್ಲಿ 24.72 ಲಕ್ಷ ಮನೆಗಳಿಗೆ ನೀರಿನ ಸಂಪರ್ಕ ಕಲ್ಪಿಸಲಾಗಿದೆ ಎಂದರು.

ಮನೆಮನೆಗೆ ಗಂಗೆ ಯೋಜನೆಗಾಗಿ ಕೇಂದ್ರ ಸರ್ಕಾರ 4,093 ಕೋಟಿ ರು, ರಾಜ್ಯ ಸರ್ಕಾರ 3,982 ಕೋಟಿ ರು. ನೀಡುತ್ತಿವೆ. ರಾಜ್ಯದ 39,963 ಸರ್ಕಾರಿ ಶಾಲೆಗಳಿಗೆ ಶುದ್ಧ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ.  ಪ್ರಧಾನ ಮಂತ್ರಿ ಅವರ ನಿರ್ದೇಶನದಂತೆ  ಉಳಿದ 1,595 ಶಾಲೆಗಳಿಗೆ ಮುಂದಿನ 100 ದಿನಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿರುವ 65,911 ಅಂಗನವಾಡಿಗಳಲ್ಲಿ, 41,799 ಅಂಗನವಾಡಿ ಕೇಂದ್ರಗಳಿಗೆ ನೀರು ಪೂರೈಸಲಾಗುತ್ತಿದೆ. ಉಳಿದ ಅಂಗನವಾಡಿ ಕೇಂದ್ರಗಳಿಗೆ ಮುಂದಿನ ಮೂರು ತಿಂಗಳಲ್ಲಿ ನೀರು ಪೂರೈಸಲಾಗುವುದು ಎಂದು ಹೇಳಿದ್ದಾರೆ.

SCROLL FOR NEXT